9:29 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಹಿಜಾಬ್ ಸಂವಿಧಾನಬದ್ಧ ಹಕ್ಕು, ಯಾವುದೇ ಬೆಲೆ ತೆತ್ತಾದರೂ ರಕ್ಷಿಸಲಾಗುವುದು: ಮುಸ್ಲಿಂ ಒಕ್ಕೂಟ

07/02/2022, 09:49

ಮಂಗಳೂರು(reporterkarnataka.com): .ಹಿಜಾಬ್ ಹಕ್ಕನ್ನು ಯಾವುದೇ ಬೆಲೆ ತೆತ್ತಾದರೂ ರಕ್ಷಿಸಲಾಗುವುದು. ಮುಸ್ಲಿಂ ವಿದ್ಯಾರ್ಥಿನಿಯರ ಶೈಕ್ಷಣಿಕ ಭವಿಷ್ಯಕ್ಕೆ ತಡೆಯೊಡ್ಡುವ ಈ ಷಡ್ಯಂತ್ರವನ್ನು ದ.ಕ.ಜಿಲ್ಲಾ ಮುಸ್ಲಿಂ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ. ಮಾತ್ರವಲ್ಲ ಈ ಅನ್ಯಾಯದ ವಿರುದ್ಧ ಪ್ರಬಲ ಹೋರಾಟ ಮಾಡಲಿದ್ದೇವೆ ಎಂದು ದ.ಕ. ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಕೆ. ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ನೂರಾರು ವರ್ಷಗಳಿಂದ ಮುಸ್ಲಿಂ ವಿದ್ಯಾರ್ಥಿನಿಯರು ಧರಿಸುತ್ತಾ ಬರುತ್ತಿರುವ ಮತ್ತು ಭಾರತದ ಸಂವಿಧಾನದಲ್ಲೂ ಅವಕಾಶ ಕಲ್ಪಿಸಲಾದ ಹಿಜಾಬ್, ಸ್ಕಾರ್ಫ್ ನ ಬಗ್ಗೆ ತೀರಾ ಅನಗತ್ಯವಾದ ವಿವಾದವನ್ನು ಸೃಷ್ಟಿಸಿ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಕೋಮು ವಿಷಬೀಜವನ್ನು ಬಿತ್ತುವ ಹುನ್ನಾರ ನಡೆಯುತ್ತಿರುವುದು
ವಿಷಾದನೀಯ ಎಂದು ಅವರು ಹೇಳಿದ್ದಾರೆ.

ಸಂವಿಧಾನ ಬದ್ಧವಾದ ಹಿಜಾಬ್ ಧರಿಸುವ ಪ್ರಕ್ರಿಯೆಗೆ ತಡೆಯೊಡ್ಡುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಸೌಹಾರ್ದ ವಾತಾವರಣ ಶಾಶ್ವತ ವಾಗಿರುವಂತೆ ನೋಡಿಕೊಳ್ಳಬೇಕು ಎಂದು ಅಶ್ರಫ್ ಒತ್ತಾಯಿಸಿದ್ದಾರೆ. 

ಹಿಜಾಬ್ ಧಾರಣೆ ಮುಸ್ಲಿಮ್ ಧರ್ಮದ ಧಾರ್ಮಿಕ ಮತ್ತು ಸಾಂವಿಧಾನಿಕ ಹಕ್ಕು.ಇದನ್ನು ಯಾವುದೇ ಬೆಲೆ ತೆತ್ತು ಸಂರಕ್ಷಿಸ ಲಾಗುವುದು. ಹಿಜಾಬ್ ಸಂಬಂಧಿತ ವಿವಾದ ಕರ್ನಾಟಕ ಉಚ್ಛನ್ಯಾಯಲಯ ದಲ್ಲಿ ಇದ್ದು, ತೀರ್ಪನ್ನು ಗೌರವಿಸಲಾಗುವುದು. ಭಾರತ ದ ಸಂವಿಧಾನದಲ್ಲಿ ಧಾರ್ಮಿಕ ಆಚರಣೆಗೆ ಮುಕ್ತ ಸ್ವಾತಂತ್ರ್ಯ ವಿರುವುದರಿಂದ ಸಂವಿಧಾನದ ಆಶಯವನ್ನು ನ್ಯಾಯಾಲಯ ಎತ್ತಿ ಹಿಡಿಯಲಿದೆ ಎಂಬ ಆಶಾ ಭಾವನೆ ಇದೆ ಎಂದು ಅಶ್ರಫ್ ರವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು