10:57 PM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಸಂಸ್ಕೃತಿ – ಪರಂಪರೆಯ ಪ್ರತೀಕ: ವೈಭವದ ಮಂಗಳೂರು ರಥೋತ್ಸವ ಸಂಪನ್ನ

08/02/2022, 13:04

ಚಿತ್ರ : ಮಂಜು ನೀರೇಶ್ವಾಲ್ಯ
ಮಂಗಳೂರು(reporterkarnataka.com):
ಶ್ರೀ ಮಂಗಳಾದೇವಿಯ ನೆಲೆ ಬೀಡಾದ ಮಂಗಳೂರು ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಪಾಲಿಗೂ ಸಾಧನೆಯ ಕ್ಷೇತ್ರ. ಇಲ್ಲಿನ ರಥಬೀದಿಯ ಶ್ರೀ ವೆಂಕಟರಮಣ ದೇವಳ ಸಮಾಜದ ಧರ್ಮ ಪೀಠಗಳಲ್ಲೊಂದಾದ ಶ್ರೀ ಕಾಶೀಮಠ ಸಂಸ್ಥಾನ್ ವಾರಾಣಸಿಯ ಒಂದು ಕಣ್ಣಿನಂತೆ  ಮತ್ತು ದೇಶದ ಪ್ರಮುಖ ದೇವಾಲಯ ಎಂದು ಬಿಂಬಿತವಾಗಿದೆ ಕಾಲ ಉರುಳಿದ ಪ್ರಭಾವ ಇಲ್ಲಿನ ವಾರ್ಷಿಕ ರಥೋತ್ಸವ ಒಂದು. ಸಮಗ್ರ  ಭಜಕ ವೃಂದದವರಿಗೆ ಅವರ್ಣನೀಯ ಪುಳಕೋತ್ಸವ, ಧನ್ಯತೆಯಿಂದ ಬೀಗುವ  ಸಂದರ್ಭ.

ಪ್ರತಿ ಮಾಘ ಮಾಸದ ಶುದ್ಧ ತದಿಗೆಯಂದು ಆರಂಭವಾಗಿ ಅಷ್ಟಮಿಯಂದು ಮುಕ್ತಾಯಗೊಳ್ಳುವ ರಥೋತ್ಸವ ಕಾರ್ಯಕ್ರಮದಲ್ಲಿ ರಥಸಪ್ತಮಿಯ ಶುಭದಿನ ದಂದು  ಆ ಬ್ರಹ್ಮರಥೋತ್ಸವ ನಡೆಯುವುದು ವಾಡಿಕೆ. ಮಂಗಳೂರು ರಥ ಎಂದು ಅಭಿದಾನಗೈದಿರುವ ಶ್ರೀ ರಥೋತ್ಸವ ಧಾರ್ಮಿಕ ವಿಧಿ ಆಚರಣೆಗೆ ಮಾತ್ರ ಸೀಮಿತಗೊಳ್ಳದ ಲೌಕಿಕ-ಪಾರಲೌಕಿಕ ಸಾಮಾಜಿಕ, ಸೌಹಾರ್ದತೆಗಳನ್ನೊಳಗೊಂಡು ಸಂಸ್ಕೃತಿ – ಪರಂಪರೆಯ ಕೊಂಡಿಯಾಗಿ ಅನುಸೂತ್ರವಾಗಿ ಮುಂದುವರಿದು ಭಾವೀ ಪೀಳಿಗೆಗೆ ವರ್ಗಾಯಿಸುವ ಸಂಪ್ರದಾಯಗಳ ಹಿನ್ನೆಲೆಯ ಮಹಾಪರ್ವ ಮತ್ತು ದಕ್ಷಿಣ ಭಾರತದ ಮಹೋತ್ಸವಗಳ ಪೈಕಿ ಒಂದು ಪ್ರಮುಖ ಮಹೋತ್ಸವವಾಗಿ ರೂಪುಗೊಂಡಿದೆ . ಶ್ರೀ ಕಾಶಿ ಮಠದ ಪೀಠಾಧಿಪತಿ ಶ್ರೀಮದ್ ಸಂಯಮೀಂದ್ರತೀರ್ಥ ಸ್ವಾಮೀಜಿಗಳವರ ಈ ಬಾರಿಯ ಉಪಸ್ಥಿತಿ ರಥೋತ್ಸವವನ್ನು ಚಂದಗಾಣಿಸಲು ಸಂಭ್ರಮಿಸಲು ಕಾರಣವಾಗುತ್ತದೆ.

ಈ ಬಾರಿ 201ನೇ ವರ್ಷಾಚರಣೆಯಲ್ಲದೆ ನೂತನ ಬ್ರಹ್ಮರಥದಲ್ಲಿ ರಥೋತ್ಸವ ದೇಶ ವಿದೇಶಗಳಿಂದ ಸಹಸ್ರಾರು ಭಜಕರು ಪಾಲ್ಗೊಂಡು ಪುನೀತರಾದರು . ಶ್ರೀ ದೇವಳದ ಮೊಕ್ತೇಸರರಾದ ಸಿ. ಎಲ್. ಶೆಣೈ , ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ , ಕೊಡುಗೈ ದಾನಿ ಪಿ . ದಯಾನಂದ ಪೈ , ಮುಂಡ್ಕುರ್ ರಾಮದಾಸ್ ಕಾಮತ್ , ಮಂಗಳೂರು ದಕ್ಷಿಣ ಶಾಸಕ ಡಿ . ವೇದವ್ಯಾಸ್ ಕಾಮತ್ ಉಪಸ್ಥಿತರಿದ್ದರು 

ಇತ್ತೀಚಿನ ಸುದ್ದಿ

ಜಾಹೀರಾತು