9:27 AM Monday16 - February 2026
ಬ್ರೇಕಿಂಗ್ ನ್ಯೂಸ್
ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ…

ಇತ್ತೀಚಿನ ಸುದ್ದಿ

ಹಿಜಾಬ್: ಉಡುಪಿ ಎಂಜಿಎಂ ಕಾಲೇಜಿಗೆ ಅನಿರ್ದಿಷ್ಟಾವಧಿ ರಜೆ; ಶಿವಮೊಗ್ಗದಲ್ಲಿ 144 ಸೆಕ್ಷನ್ ಜಾರಿ; ಕೋರ್ಟ್ ಏನು ಹೇಳುತ್ತದೆ?

08/02/2022, 18:52

ಉಡುಪಿ(reporterkarnataka.com): ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಎಂಜಿಎಂ ಕಾಲೇಜಿಗೆ ಅನಿರ್ದಿಷ್ಟಾವಧಿ ರಜೆ ಘೋಷಿಸಲಾಗಿದೆ.

ಹಿಜಾಬ್ -ಕೇಸರಿ ನಡುವಿನ ಗಲಾಟೆ ಪರಿಸ್ಥಿತಿಯನ್ನು ಹತೋಟಿಗೆ ತರುವ ಉದ್ದೇಶದಿಂದ ಅನಿರ್ಧಿಷ್ಟಾವಧಿವರೆಗೆ ಕಾಲೇಜಿಗೆ ರಜೆ ಕೊಟ್ಟಿದ್ದೇವೆ. ಕೋರ್ಟ್ ಆದೇಶ ಏನು ಬರುತ್ತದೆ ಎಂಬುವುದನ್ನು ಕಾದುನೋಡುತ್ತೇವೆ. ಮುಂದಿನ ತೀರ್ಮಾನ ಆಡಳಿತ ಮಂಡಳಿ ತೆಗೆದುಕೊಳ್ಳುತ್ತದೆ. ಅಲ್ಲಿಯವರೆಗೆ ಪಿಯುಸಿ ಹಾಗೂ ಪದವಿ ಕಾಲೇಜಿಗೆ ರಜೆ ಘೋಷಣೆ ಮಾಡಿದ್ದೇವೆ ಎಂದು ಉಡುಪಿ ಎಂಜಿಎಂ ಕಾಲೇಜಿನ ಡಾ. ದೇವಿದಾಸ್ ಎಸ್. ನಾಯ್ಕ್ ತಿಳಿಸಿದ್ದಾರೆ.

ತ್ರಿವರ್ಣ ಬದಲಿಗೆ ಕೇಸರಿ ಧ್ವಜ:  ಕೇಸರಿ ಹಿಜಾಬ್ ವಿವಾದಗಳ ನಡುವೆ ಶಿವಮೊಗ್ಗದ ಸರ್ಕಾರಿ ಪದವಿ ಕಾಲೇಜಿನಲ್ಲಿ ತ್ರಿವರ್ಣ ಧ್ವಜ ಹಾರಿಸುವ ಧ್ವಜಸ್ತಂಭದಲ್ಲಿ ಕೇಸರಿ ಬಾವುಟ ಹಾರಿಸಿದ ಘಟನೆ ನಡೆದಿದೆ. ಎಸ್.ಪಿ.ಲಕ್ಷ್ಮೀಪ್ರಸಾದ್ ಹಾಗು ಪೋಲೀಸರು ಕಾರ್ಯಪ್ರವೃತ್ತರಾಗಿ ಲಾಠಿ ಬೀಸಿದ್ದು, ಗುಂಪುಗಳನ್ನು ಚದುರಿಸಿದ್ದಾರೆ.ನಗರದಲ್ಲಿ ಲಾಂಗ್ ಮಚ್ಚುಗಳ ವಶ :ಶಿವಮೊಗ್ಗದಲ್ಲಿ ಭುಗಿಲೆದ್ದಿರುವ ಹಿಜಾಬ್ ಮತ್ತು ಕೇಸರಿ ಶಾಲಿನ ವಿಚಾರದಲ್ಲಿ ಇಂದು ಮತ್ತು ನಾಳೆನೂ ಸೆಕ್ಷನ್ 144 ಜಾರಿಯಾಗಿದ್ದು ಲಷ್ಕರ್ ಮೊಹಲ್ಲಾದಲ್ಲಿ

ಯುವಕರು ರಸ್ತೆಗಿಳಿದು ದಿಡೀರನೇ ಪ್ರತಿಭಟನೆ ನಡೆಸಿದ್ದು, ಲಾಂಗು ಮಚ್ಚು ಗಳನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕೋರ್ಟ್ ಏನು ಹೇಳಿದೆ?: 

ರಾಜ್ಯ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಿತ್ತಿದ್ದು, ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.

ವಿವಾದ ಸಂಬಂಧ ಸಲ್ಲಿಕೆಯಾಗಿರುವ ನಾಲ್ಕು ಅರ್ಜಿಗಳನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್‌ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸುತ್ತಿದ್ದು, ಎಲ್ಲ ಭಾವನೆಗಳನ್ನು ಪಕ್ಕಕ್ಕೆ ಇರಿಸಿ. ಸಂವಿಧಾನ ಏನು ಹೇಳುತ್ತದೋ ಅದರಂತೆ ನಡೆಯುತ್ತೇವೆ. ಭಗದ್ಗೀತೆಗಿಂತ ಸಂವಿಧಾನವೇ ಮೇಲು ಎಂದು ವಿಚಾರಣೆ ವೇಳೆ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು