1:48 PM Wednesday26 - November 2025
ಬ್ರೇಕಿಂಗ್ ನ್ಯೂಸ್
ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಬಾಲಕಾರ್ಮಿಕರ ಪತ್ತೆಗೆ ಕಾರ್ಯಾಚರಣೆ: ಹೋಟೆಲ್, ಗ್ಯಾರೇಜ್, ಫ್ಯಾಕ್ಟರಿಗಳಿಗೆ ಹಠಾತ್ ದಾಳಿ

10/02/2022, 08:13

ಸಾಂದರ್ಭಿಕ ಚಿತ್ರ
ಮಂಗಳೂರು(reporterkarnataka.com):ಬಾಲ ಕಾರ್ಮಿಕ ಕಾಯ್ದೆ ಉಲ್ಲಂಘಿಸಿದವರಿಗೆ 50 ಸಾವಿರ ರೂ.ಗಳ ದಂಡ ಹಾಗೂ ಎರಡು ವರ್ಷಗಳ ಜೈಲು ಶಿಕ್ಷೆಯೊಂದಿಗೆ ಕೋವಿಡ್-19 ಸಂಕಷ್ಟದ ಸಮಯದಲ್ಲಿ ಮಕ್ಕಳನ್ನು ಬಾಲ ಕಾರ್ಮಿಕತೆಯಿಂದ ಮುಕ್ತವಾಗಿಸಲು ಜಿಲ್ಲಾಧಿಕಾರಿಯವರ ನಿರ್ದೇಶನದಂತೆ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ.

ಅದರ ಅಂಗವಾಗಿ ಕಾರ್ಮಿಕ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಫ್ಯಾಕ್ಟರಿ ಮತ್ತು ಬಾಯ್ಲರ್ ಇಲಾಖೆ ಮತ್ತು ಮಹಾನಗರ ಪಾಲಿಕೆಯ ಅಧಿಕಾರಿಗಳ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್
ಸಮಿತಿಯನ್ನು ರಚಿಸಿಕೊಂಡು ಮಂಗಳೂರು ನಗರದ ಅಪಾರ್ಟ್‍ಮೆಂಟ್‍ಗಳು, ಹೋಟೆಲ್‍ಗಳು, ಗ್ಯಾರೇಜ್ ಹಾಗೂ ಫ್ಯಾಕ್ಟರಿಗಳಿಗೆ ಫೆ.8ರ ಮಂಗಳವಾರ ಅನಿರೀಕ್ಷಿತ ದಾಳಿ ನಡೆಸಿ, ಪರಿಶೀಲಿಸಿದರು. ಈ ವೇಳೆ ಬಾಲಕಾರ್ಮಿಕ ಕಾಯ್ದೆಯ ಬಗ್ಗೆ ಮಾಹಿತಿ ನೀಡುವುದರೊಂದಿಗೆ ಸ್ಟಿಕ್ಕರ್ ಮತ್ತು ಕರಪತ್ರಗಳನ್ನು ಹಂಚುವ ಮೂಲಕ ಜಾಗೃತಿ ಮೂಡಿಸಿದರು. 

ಸಹಾಯಕ ಕಾರ್ಮಿಕ ಆಯುಕ್ತ ಬಿ.ಇ. ಶಿವಕುಮಾರ್, ಕಾರ್ಮಿಕ ಅಧಿಕಾರಿ  ಅಮರೇಂದ್ರ, ಟಿ. ಕಾವೇರಿ ಹಾಗೂ ಹಿರಿಯ ಕಾರ್ಮಿಕ ನಿರೀಕ್ಷಕರಾದ ಜೀವನ್ ಕುಮಾರ್, ಮೇರಿ ಪಿ ಡಯಾಸ್, ವೀರೆಂದ್ರ ಕುಂಬಾರ್ ಶ್ರೀನಿವಾಸ್, ಯೋಜನಾ ನಿರ್ದೇಶಕರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದರು.

ಬಾಲಕಾರ್ಮಿಕರು ಕಂಡುಬಂದರೆ ಚೈಲ್ಡ್ ಲೈನ್-1098, ಕಾರ್ಮಿಕ ಇಲಾಖೆ ದೂ.ಸಂಖ್ಯೆ:0824-2435343, ಜಿಲ್ಲಾ ಕಾರ್ಮಿಕ ಯೋಜನಾ ಸಂಘ ದೂ.ಸಂಖ್ಯೆ: 2433131 ಸಂಖ್ಯೆಗಳಿಗೆ ಕರೆ ಮಾಡಿ ದೂರು  ನೀಡುವಂತೆ ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು