1:39 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಸೋಮವಾರದಿಂದಲೇ ಪ್ರೌಢಶಾಲೆ ಆರಂಭ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ

11/02/2022, 08:33

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಹಿಜಾಬ್ ವಿವಾದದಿಂದ ಬಂದ್ ಆಗಿರುವ ಶಾಲೆಗಳನ್ನು ಮತ್ತೆ ತೆರೆಯುವಂತೆ ಹೈಕೋರ್ಟ್ ಸೂಚಿಸಿದ ಬೆನ್ನಲೇ ಸಭೆ ನಡೆಸಿದ ಸಿಎಂ ಸಿಎಂ ಬಸವರಾಜ ಬೊಮ್ಮಾಯಿ , ಸೋಮವಾರದಿಂದ ಮೊದಲ ಹಂತದಲ್ಲಿ 10ನೇ ತರಗತಿವರೆಗೆ ಶಾಲೆ ಪ್ರಾರಂಭವಾಗಲಿದೆ ಎಂದು ಹೇಳಿದ್ದಾರೆ.

ಶಾಲೆ ಆರಂಭದ ಬಗ್ಗೆ ಶಿಕ್ಷಣ ಸಚಿವರು, ಗೃಹ ಸಚಿವರ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು, ಹೈಕೋರ್ಟ್ ಶಾಲಾ ಕಾಲೇಜು ಆರಂಭಕ್ಕೆ ಸೂಚಿಸಿದ ಕಾರಣ ಸೋಮವಾರ ಮೊದಲ ಹಂತದಲ್ಲಿ 10 ನೇ ತರಗತಿವರೆಗೆ ಶಾಲೆ ಆರಂಭಿಸಲಾಗುವುದು. ಎರಡನೇ ಹಂತದಲ್ಲಿ ಪಿಯುಸಿ, ಡಿಗ್ರೀ ತರಗತಿ ಆರಂಭವಾಗಲಿದೆ ಎಂದರು.

ರಾಜ್ಯದಲ್ಲಿ ಉಂಟಾದ ಘರ್ಷಣೆಯಿಂದಾಗಿ ಸರ್ಕಾರ 3 ದಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಿತ್ತು.ಇದೀಗ ಹೈಕೋರ್ಟ್​ ಶಿಕ್ಷಣ ಕೇಂದಗಳನ್ನು ಮುಚ್ಚದಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸೋಮವಾರ ಪುನಾರಂಭಿಸಲಾಗುವುದು ಎಂದರು.

ಇನ್ನು ನಾಳೆ ಸಂಜೆ ಎಲ್ಲಾ ಸಚಿವರ, ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿ ಆಯಾ ಜಿಲ್ಲೆಯ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆಯಲಾಗುವುದು. ಬಳಿಕ ಎಲ್ಲ ಶಾಲಾ – ಕಾಲೇಜು ಆರಂಭಿಸಲು ನಿರ್ಧರಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು