4:25 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮನೆ ಬಿಟ್ಟು ಬಂದ ಕೋಲಾರದ ಯುವತಿಯ ಮೇಲೆ ಅತ್ಯಾಚಾರ: ವೇಶ್ಯಾವಾಟಿಕೆ ಮಾರಲು ಯತ್ನ: ಆರೋಪಿ ಬಂಧನ

12/02/2022, 18:15

ಬೆಂಗಳೂರು(reporterkarnataka.com): ಮನೆ ಬಿಟ್ಟು ಬಂದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಆಕೆಯನ್ನು ಮನೆಗೆ ಕರೆದೊಯ್ದು ಅತ್ಯಾಚಾರ ನಡೆಸಿ, ನಂತರ ವೇಶ್ಯಾವಾಟಿಕೆ ಮಾರಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಮನೆಯವರೊಂದಿಗೆ ಜಗಳ ಮಾಡಿಕೊಂಡು ಕೋಲಾರದಿಂದ ಯುವತಿ ಬೆಂಗಳೂರಿಗೆ ಬಂದಿದ್ದಳು. ಮೆಜೆಸ್ಟಿಕ್ ಗೆ ತಲುಪಿದ ಯುವತಿ ಕಂಗಾಲಾಗಿ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಕೂತಿದ್ದಳು. ಈಕೆಯನ್ನು ಗಮನಿಸಿದ್ದ ಟ್ರಾವೆಲ್ ಏಜೆನ್ಸಿಯಲ್ಲಿ ಕೆಲಸ ಮಾಡುವ ನಾಗೇಶ್ ಎಂಬಾತ ಆಕೆಗೆ ಸಹಾಯ ಮಾಡುವುದಾಗಿ ನಂಬಿಸಿದ್ದಾನೆ.

ಯುವತಿ ಆತನ ಮಾತು ನಂಬಿ ದೇವನಹಳ್ಳಿಯ ಆತನ ಮನೆಗೆ ಹೋಗಿದ್ದಳು. ಈ ವೇಳೆ ಅಲ್ಲಿ ಆಕೆಯ ಮೇಲೆ ಆರೋಪಿ ಅತ್ಯಾಚಾರ ನಡೆಸಿದ್ದಾನೆ. ಬಳಿಕ ಆಕೆಯನ್ನು ಹೆದರಿಸಿ, 10 ಸಾವಿರ ರೂಪಾಯಿಗಳಿಗೆ ವೇಶ್ಯಾವಾಟಿಕೆ ಜಾಲದೊಂದಿಗೆ ಡೀಲ್ ಕುದುರಿಸಿಕೊಂಡ ಆರೋಪಿ, ಆಕೆಯನ್ನು ಮಾರುವ ಉದ್ದೆಶದಿಂದ ದೆಹಲಿಗೆ ಕರೆದೊಯ್ಯಲು ವಿಮಾನ ನಿಲ್ದಾಣಕ್ಕೆ ಬಂದಿದ್ದಾನೆ.

ಇವರಿಬ್ಬರನ್ನು ನೋಡಿ ಅನುಮಾನಗೊಂಡ ವಿಮಾನ ನಿಲ್ದಾಣ ಪೊಲೀಸರು ವಿಚಾರಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಆರೋಪಿ ಈ ಹಿಂದೆಯೂ ಯುವತಿಯರನ್ನು ದೆಹಲಿಯಲ್ಲಿ ಮಾರಾಟ ಮಾಡಿರುವುದು ವಿಚಾರಣೆಯಲ್ಲಿ ತಿಳಿದುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು