9:57 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಗೋವಾ ವಿಧಾನಸಭೆ ಚುನಾವಣೆ: ಬಿಜೆಪಿ ಪರ ಶಾಸಕ ವೇದವ್ಯಾಸ ಕಾಮತ್ ಬಿರುಸಿನ ಪ್ರಚಾರ

12/02/2022, 18:41

ಪಣಜಿ(reporterkarnataka.com): ಗೋವಾ ವಿಧಾನಸಭಾ ಚುನಾವಣೆಯ ಪ್ರಯುಕ್ತ ಶಾಸಕ‌ ಡಿ. ವೇದವ್ಯಾಸ ಕಾಮತ್ ಅವರು ಅಂತಿಮ ಹಂತದ ಪ್ರಚಾರ ನಡೆಸಿ ಪಣಜಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಮತಯಾಚಿಸಿದರು. 

ಈ ಕುರಿತು ಮಾತನಾಡಿದ‌ ಶಾಸಕ ಕಾಮತ್, ಪಣಜಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ದಾಖಲಿಸಲಿದೆ. ಗೋವಾ ರಾಜ್ಯದಲ್ಲಿ ಅಭಿವೃದ್ಧಿಯ ಚಿಂತನೆಯಿಂದ ಆಡಳಿತ ನಡೆಸಿದ ಬಿಜೆಪಿಯ ವೈಖರಿಯನ್ನು ಜನತೆ ಮೆಚ್ಚಿಕೊಂಡಿದ್ದಾರೆ. ಸಮರ್ಥ ನಾಯಕತ್ವ, ಅಭಿವೃದ್ಧಿಯನ್ನು ಮುಂದಿಟ್ಟು ಗೋಲ್ಡನ್ ಗೋವಾ ನಿರ್ಮಾಣದ ಕನಸಿನೊಂದಿಗೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಆಡಳಿತಕ್ಕೇರಲಿದೆ ಎಂದು ಹೇಳಿದ್ದಾರೆ. 

ಈ ಸಂದರ್ಭದಲ್ಲಿ ಪಣಜಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಟಾನಾಸಿಯೊ ಮೊನ್ಸೆರಾಟೆ, ಬಿಜೆಪಿ ರಾಜ್ಯ ವಕ್ತಾರ ಗಣೇಶ್ ಕಾರ್ಣಿಕ್, ಮುಖಂಡರಾದ ಸಂಜಯ್ ಪ್ರಭು, ವಸಂತ್ ಜೆ ಪೂಜಾರಿ, ಪಣಜಿ ಕ್ಷೇತ್ರದ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು