11:26 AM Tuesday17 - February 2026
ಬ್ರೇಕಿಂಗ್ ನ್ಯೂಸ್
ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,…

ಇತ್ತೀಚಿನ ಸುದ್ದಿ

ಕಾರಿಂಜೇಶ್ವರ ದೇಗುಲದ ಆಸುಪಾಸಿನಲ್ಲಿ ಕಲ್ಲು ಗಣಿಗಾರಿಕೆ ಚಟುವಟಿಕೆ ಸ್ಥಗಿತ: ಸಚಿವ ಸುನಿಲ್ ಕುಮಾರ್ 

14/02/2022, 15:18

ಮಂಗಳೂರು(reporterkarnataka.com): ಕರಾವಳಿಯ ಅತ್ಯಂತ ಪ್ರಸಿದ್ಧ ಹಾಗೂ ಪುರಾತನ ದೇವಸ್ಥಾನಗಳಲ್ಲೊಂದಾದ ಬಂಟ್ವಾಳ ತಾಲೂಕಿನ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಆಸುಪಾಸು ಅಂದರೆ ಕಾವಳ ಮೂಡೂರು ಗ್ರಾಮ ಮತ್ತು ಕಾವಳ ಪಡೂರು ಗ್ರಾಮಗಳಲ್ಲಿ 03 ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು ಸ್ಥಳೀಯರ ಹಾಗೂ ದೇವಸ್ಥಾನದ ಭಕ್ತಾಧಿಗಳ ದೂರಿನ ಹಿನ್ನೆಲೆಯಲ್ಲಿ ಆ ಪ್ರದೇಶದಲ್ಲಿ  ನಡೆಯುತ್ತಿದ್ದ 03 ಕಪ್ಪು ಕಲ್ಲು ಗಣಿಗಾರಿಕೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಇಂಧನ, ಕನ್ನಡ ಹಾಗೂ ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವರು, ಕಾವಳ ಮೂಡೂರು ಗ್ರಾಮದ ಸರ್ವೆ ನಂ. 164/2ಪಿ1 ರಲ್ಲಿ 0.50 ಎಕ್ರೆ ಮತ್ತು 172/2ಪಿ1 ರಲ್ಲಿ 0.50 ಎಕ್ರೆ ಒಟ್ಟು 1.00 ಎಕ್ರೆ ಪ್ರದೇಶದಲ್ಲಿ 2007 ರಿಂದ ಗಣಿಗಾರಿಕೆ ನಡೆಯುತ್ತಿದ್ದು, ತನ್ನ ಪರವಾನಿಗೆಯ ವ್ಯಾಪ್ತಿ ಮೀರಿ ಸುಮಾರು 3.28 ಎಕ್ರೆ ಪ್ರದೇಶದಲ್ಲಿ ಅಕ್ರಮವಾಗಿ ಗಣಿಗಾರಿಕೆ ಮಾಡಿರುವ ಹಿನ್ನೆಲೆಯಲ್ಲಿ 8,12,87,198 ರೂ. ದಂಡ ಪಾವತಿಸುವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸೂಚಿಸಿದ್ದು ದಂಡ ಪಾವತಿಸದ ಕಾರಣ ಸದ್ರಿ ಗಣಿಗಾರಿಕೆಯನ್ನು 2021ರ ಡಿಸೆಂಬರ್ ತಿಂಗಳಲ್ಲಿ ಸ್ಥಗಿತಗೊಳಿಸಲಾಗಿದೆ ಹಾಗೂ ಅನಧಿಕೃತ ಗಣಿಗಾರಿಕೆ ನಡೆಸಿರುವ ಮಾಲಿಕರ ವಿರುದ್ಧ ಬಂಟ್ವಾಳ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ.

ಕಾವಳ ಪಡೂರು ಗ್ರಾಮದ ಸ.ನಂ 121/2ಪಿ1 ರಲ್ಲಿ 1.00 ಎಕ್ರೆ ವಿಸ್ತೀರ್ಣದಲ್ಲಿ 2016 ರಿಂದ ಆರಂಭಗೊAಡಿದ್ದ ಗಣಿಗಾರಿಕೆ 20 ವರ್ಷಗಳ ಅವಧಿಗೆ ಪರವಾನಿಗೆ ಇದ್ದರೂ ಕೂಡ ಗುತ್ತಿಗೆದಾರರು ಗೋಮಾಳ ಜಾಗವನ್ನು ಅತಿಕ್ರಮಿಸಿ ಗಣಿಗಾರಿಕೆ ನಡೆಸುತ್ತಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಸದ್ರಿ ಗಣಿಗಾರಿಕೆಯನ್ನು ಸ್ಥಗಿತಗೊಳಿಸಲಾಗಿದೆ. ಹಾಗೂ ಸ.ನಂ 122/3ಪಿ1 ರಲ್ಲಿ 1.00 ಎಕ್ರೆ ಜಮೀನಿನಲ್ಲಿ 2015 ರಿಂದ ಆರಂಭಗೊAಡಿದ್ದ ಗಣಿಗಾರಿಕೆಯನ್ನು ಅದರ ಗುತ್ತಿಗೆದಾರರು ಮೃತಪಟ್ಟಿದ್ದು ಅದೇ ಗಣಿಗಾರಿಕೆ ಪ್ರದೇಶದಲ್ಲಿ ಅನಧಿಕೃತವಾಗಿ ಬೇರೆ ವ್ಯಕ್ತಿ  ಗಣಿಗಾರಿಕೆ ಮಾಡುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಈ ಗಣಿಗಾರಿಕೆಯನ್ನೂ ಸ್ಥಗಿತಗೊಳಿಸಲಾಗಿದೆ.

ದೇವಸ್ಥಾನದ ಆಸುಪಾಸು ಕಾರ್ಯಚರಿಸುತ್ತಿದ್ದ 03 ಕಲ್ಲು ಗಣಿಗಾರಿಕೆಯನ್ನು ಸ್ಥಗಿತಗೊಳಿಸಲಾಗಿದ್ದು ಸಾವಿರಾರು ವರ್ಷಗಳ ಇತಿಹಾಸವಿರುವ ಪವಿತ್ರ ಧಾರ್ಮಿಕ ಕ್ಷೇತ್ರವಾದ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಯಾವುದೇ ಧಕ್ಕೆ ಭಾರದ ಹಾಗೂ ಕ್ಷೇತ್ರ ವ್ಯಾಪ್ತಿಯಲ್ಲಿ ಇನ್ನು ಮುಂದೆ ಯಾವುದೇ ರೀತಿಯ ಗಣಿಗಾರಿಕೆ ಚಟುವಟಿಕೆ ನಡೆಸದಂತೆ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ. 

ದೇವಸ್ಥಾನದ ಪರಿಸರವನ್ನು ಅತೀ ಸೂಕ್ಷ ವಲಯ ಎಂದು ಘೋಷಣೆ ಮಾಡುವ ಬಗ್ಗೆ ಈಗಾಗಲೇ ಸರಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದ್ದು ಮುಂದಿನ ದಿನಗಳಲ್ಲಿ ಭಕ್ತಾಧಿಗಳ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುವ ಬಗ್ಗೆ ಸರಕಾರದ ಹಂತದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರಾದ ವಿ ಸುನಿಲ್ ಕುಮಾರ್ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು