6:20 PM Wednesday26 - November 2025
ಬ್ರೇಕಿಂಗ್ ನ್ಯೂಸ್
ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಸ್ವಾತಂತ್ರ್ಯ ಹೋರಾಟದಲ್ಲಿ ನೂರಾರು ಮುಲ್ಲಾಗಳು ಗಾಂಧೀಜಿಗೆ ಹೆಗಲಾಗಿದ್ದರು: ಪ್ರತಿಪಕ್ಷದ ಉಪ ನಾಯಕ ಯು.ಟಿ.ಖಾದರ್

14/02/2022, 21:55

ಬೆಂಗಳೂರು(reporterkarnataka.com): ಸಂಸದ ಪ್ರತಾಪ್ ಸಿಂಹ ಅವರು ನನ್ನನ್ನು ಮುಲ್ಲಾ ಎಂದು ಕರೆದರೆ ನಾನು ಖುಷಿಪಡುತ್ತೇನೆ. ಯಾಕೆಂದರೆ ಈ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ನೂರಾರು ಮುಲ್ಲಾಗಳು ಗಾಂಧೀಜಿಗೆ ಹೆಗಲಾಗಿದ್ದರು ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ.ಖಾದರ್ ಹೇಳಿದರು.

ಪ್ರತಾಪ್ ಸಿಂಹ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಹತ್ತಾರು ಮುಲ್ಲಾಗಳು/ಮೌಲ್ವಿಗಳು ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈಗ ಇತಿಹಾಸಕ್ಕೆ ಬರೋಣಾ. ಈಗೇನಾದರೂ ಸಾವರ್ಕರ್ ಬದುಕಿದ್ದರೆ ಮೈಸೂರು ರೈಲಿಗೆ ಟಿಪ್ಪು ಎಕ್ಸ್ ಪ್ರೆಸ್ ಎಂದು ಹೆಸರು ಇಡಬೇಕೆಂದು ನನ್ನಂತೆ ಅವರೂ ಪ್ರತಿಪಾದಿಸುತ್ತಿದ್ದರು. ಈ ದೇಶಕ್ಕೆ ಬ್ರಿಟೀಷರಿಂದ ಅಪಾಯ ಇದೆ ಎಂಬುದನ್ನು ಮೊದಲು ಅರಿತವರೇ ಹೈದರಾಲಿ ಮತ್ತು ಟಿಪ್ಪು” ಎಂದು ಸಾವರ್ಕರ್ ಹೇಳುತ್ತಾರೆ. (ಪುಸ್ತಕ : ದಿ ಇಂಡಿಯನ್ ವಾರ್ ಆಫ್ ಇಂಡಿಪೆಂಡೆನ್ಸ್ 1857 ಲೇಖಕರು : ಸಾವರ್ಕರ್) ಅದೇ ಪುಸ್ತಕದಲ್ಲಿ ಸಾವರ್ಕಲ್ ಮುಲ್ಲಾಗಳ ಬಗ್ಗೆಯೂ ಬರೆಯುತ್ತಾರೆ. “ಮುಲ್ಲಾಗಳು ಬೋಧಿಸಿದ, ಬ್ರಾಹ್ಮಣರು ಆಶೀರ್ವಾದಿಸಿದ ದೆಹಲಿಯ ಮಸೀದಿಗಳು ಮತ್ತು ಬನಾರಸ್ ದೇವಸ್ಥಾನಗಳಿಂದ ಪ್ರಾರ್ಥನೆ ಮತ್ತು ತತ್ವಗಳು ಯಾವುದು ? ಅದೇ ಸ್ವಧರ್ಮ ಮತ್ತು ಸ್ವರಾಜ್” ಎಂದು ಬರೆಯುತ್ತಾರೆ.

ನಾನೇನೋ ಉಳ್ಳಾಲದ ಮುಲ್ಲಾ. ಬುದ್ಧಿವಂತ ಸಂಸದರಾಗಿರುವ ಪ್ರತಾಪ್ ಸಿಂಹ ಅವರು ಸಾವರ್ಕರ್ ಅವರನ್ನು ಒಪ್ಪುತ್ತಾರೋ ಇಲ್ಲವೋ ಹೇಳಲಿ ಎಂದು ಖಾದರ್ ಪ್ರಶ್ನಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು