11:54 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಹಿಜಾಬ್ ವಿವಾದದ ನಡುವೆ ಪಿಯು, ಡಿಗ್ರಿ ಕಾಲೇಜು ನಾಳೆಯಿಂದ ಆರಂಭ: ರಾಜ್ಯಾದ್ಯಂತ ಬಿಗಿ ಬಂದೋಬಸ್ತ್

15/02/2022, 15:11

ಬೆಂಗಳೂರು(reporterkarnataka.com): ಹಿಜಾಬ್ ವಿವಾದದ ನಡುವೆ ರಾಜ್ಯದಲ್ಲಿ.ನಾಳೆಯಿಂದ ಪಿಯುಸಿ ಹಾಗೂ ಡಿಗ್ರಿ ಕಾಲೇಜುಗಳು ಆರಂಭವಾಗಲಿದೆ. 

ಮುಖ್ಯಮಂತ್ರಿ ನೇತೃತ್ವದಲ್ಲಿ ಈ ಕುರಿತು ನಡೆದ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದು, ಫೆ.16 ರಿಂದ ಕಾಲೇಜುಗಳ ಆರಂಭಕ್ಕೆ ನಿರ್ಧರಿಸಲಾಗಿದೆ. ಹಿಜಾಬ್ ಗಲಭೆಯಿಂದಾಗಿ ಪಿಯುಸಿ ಹಾಗೂ ಡಿಗ್ರಿ ಕಾಲೇಜುಗಳನ್ನು ಬಂದ್ ಮಾಡಲಾಗಿತ್ತು.

ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ, ಗೃಹ ಆರಗ ಜ್ಞಾನೇಂದ್ರ, ಡಿಜಿ ಐಜಿಪಿ ಪ್ರವೀಣ್ ಸೂದ್ ಸೇರಿ ಶಿಕ್ಷಣ ಇಲಾಖೆ ಅಧಿಕಾರಿಗಳು ಸಭೆಯಲ್ಲಿದ್ದರು.

ರಾಜ್ಯದ ಪರಿಸ್ಥಿತಿ ಬಗ್ಗೆ ಚರ್ಚೆ ನಡೆದಿದೆ. ಬುಧವಾರದಿಂದ ಕಾಲೇಜುಗಳು ಆರಂಭವಾಗಲಿವೆ. ಈ ಬಗ್ಗೆ ಕೋರ್ಟ್ ಸೂಚನೆ ಇದೆ. ಅದನ್ನು ನಾವು ಪಾಲಿಸುತ್ತೇವೆ. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲಾಗುವುದು. ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಿದ್ದೇವೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು