1:08 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

Good News: ಬಿಪಿಎಲ್ ಕಾರ್ಡ್ ದಾರರಿಗೆ  ಹೆಚ್ಚುವರಿ 1 ಕೆಜಿ ಅಕ್ಕಿ; ಜಂಟೀ ಅಧಿವೇಶನದಲ್ಲಿ ರಾಜ್ಯಪಾಲರ ಘೋಷಣೆ

15/02/2022, 15:50

ಬೆಂಗಳೂರು(reporterkarnataka.com): ಬಿಪಿಎಲ್ ಕಾರ್ಡ್ ಹೊಂದಿರುವ ಪಡಿತರ ಚೀಟಿದಾರರಿಗೆ ಸರ್ಕಾರ ಸಿಹಿಸುದ್ದಿ ನೀಡಿದ್ದು, ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಪಡಿತರಚೀಟಿ ಹೊಂದಿದ ಪ್ರತಿ ಕುಟುಂಬಕ್ಕೆ 5 ಕೆಜಿ ಧಾನ್ಯವನ್ನು ಪ್ರತಿ ತಿಂಗಳು ಹಂಚಲಾಗುತ್ತಿದ್ದು, ಇನ್ನು ಮುಂದೆ ಹೆಚ್ಚುವರಿ 1ಕೆಜಿ ನೀಡಲಿದೆ.

ಏಪ್ರಿಲ್ 1ರಿಂದ ಜಾರಿಯಾಗುವಂತೆ ಹೆಚ್ಚುವರಿಯಾಗಿ ಒಂದು ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುವುದು ಎಂದು ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಅವರು ಇಂದು ಘೋಷಣೆ ಮಾಡಿದ್ದಾರೆ.

ಹೌದು, ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಅವರು, ಪ್ರಸ್ತುತ ಬಿಪಿಎಲ್ ಕುಟುಂಬಗಳಿಗೆ ಪ್ರತಿ ತಿಂಗಳು 5 ಕೆಜಿ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದ್ದು, ಇನ್ನು ಮುಂದೆ ಹೆಚ್ಚುವರಿಯಾಗಿ ಒಂದು ಕೆಜಿ ನೀಡಲಾಗುವುದು ಎಂದು ತಿಳಿಸಿದರು.

ಇನ್ನು, ನಿನ್ನೆ (ಫೆಬ್ರುವರಿ 14) ಆರಂಭವಾದ ವಿಧಾನಮಂಡಲ ಅಧಿವೇಶನ ಫೆಬ್ರುವರಿ 25ರ ವರೆಗೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು