6:25 PM Wednesday15 - January 2025
ಬ್ರೇಕಿಂಗ್ ನ್ಯೂಸ್
5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ… ಹಸುಗಳ ಕೆಚ್ಚಲು ಕೊಯ್ದ ‘ವ್ಯಾಘ್ರ’ನ ಬಂಧನ: ಬಿಹಾರ ಮೂಲದ ದುಷ್ಟನಿಗೆ ನ್ಯಾಯಾಂಗ ಬಂಧನ ನಂಜನಗೂಡು: ಅಂಧಕಾಸುರ ಸಂಹಾರ ಧಾರ್ಮಿಕ ಆಚರಣೆ ನಿರ್ವಿಘ್ನವಾಗಿ ಮುಕ್ತಾಯ ಹಸುಗಳ ಕೆಚ್ಚಲು ಕೊಯ್ದ ದುರುಳರ ವಿರುದ್ಧ ಕಠಿಣ ಕ್ರಮ ಜರುಗಿಸಿ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಜಪ್ಪಿನಮೊಗರು ಬಳಿ ಪೊಲೀಸ್ ಕಾರ್ಯಾಚರಣೆ: 2.20 ಕೋಟಿ ಮೌಲ್ಯದ ಅಂಬರ್ ಗ್ರೀಸ್ ವಶ; 4 ಮಂದಿ ಬಂಧನ

16/02/2022, 11:16

ಮಂಗಳೂರು(reporterkarnataka.com): ಮಂಗಳೂರು ಪೊಲೀಸರು ನಡೆಸಿದ ಭಾರಿ ಕಾರ್ಯಾಚರಣೆಯಲ್ಲಿ ಕೋಟ್ಯಂತರ ಮೌಲ್ಯದ ಅಂಬರ್ ಗ್ರೀಸನ್ನು ವಶಕ್ಕೆ ಪಡೆದಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ನಗರದ ಜಪ್ಪಿನಮೊಗರು ಬಳಿ ಪೊಲೀಸರು ನಡೆಸಿದ ಕಾರ್ಯಾಚರಣೆಯೊಂದರಲ್ಲಿ ಈ ಅಂಬರ್ ಗ್ರೀಸ್ (ತಿಮಿಂಗಿಲದ ವಾಂತಿ) ವಶಪಡಿಸಿಕೊಳ್ಳಲಾಗಿದೆ. ಇದು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುತ್ತದೆ.

ಕೊಡಗು ಜಿಲ್ಲೆಯ ಭಾಗಮಂಡಲ ನಿವಾಸಿ ಜಾಬಿರ್ ಎಂ.ಎ. ಮತ್ತು ಶಬಾದ್ ಎಲ್.ಕೆ. ಹಾಗೂ ಕಾಂಞಂಗಾಡಿನ ಅಸೀರ್ ಮತ್ತು ಶರೀಫ್ ಎನ್.ಬಂಧಿತ ಆರೋಪಿಗಳಾಗಿದ್ದಾರೆ.

ಆರೋಪಿಗಳಿಂದ 2.20 ಕೋ.ರೂ. ಮೌಲ್ಯದ ಅಂಬರ್ ಗ್ರೀಸ್, 5 ಮೊಬೈಲ್, 1 ಸ್ವಿಫ್ಟ್ ಕಾರು ಮತ್ತು 1,070 ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ 2,25,92,070 ರೂ. ಎಂದು ಅಂದಾಜಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು