2:11 PM Saturday21 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

ಕಿರು ಆಹಾರ ಉದ್ದಿಮೆಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಜಿಪಂ ಸಿಇಓ ಸೂಚನೆ

18/02/2022, 08:38

ಮಂಗಳೂರು(reporterkarnataka.com): ಜಿಲ್ಲೆಯಲ್ಲಿ ಕಿರು ಆಹಾರ ಉದ್ದಿಮೆ ಪ್ರೋತ್ಸಾಹಕ್ಕೆ ಬ್ಯಾಂಕ್ ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಅಗತ್ಯ ನೆರವು ಹಾಗೂ ಮಾರ್ಗದರ್ಶನ ನೀಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ತಾಕೀತು ಮಾಡಿದರು.

ಅವರು ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಕಿರು ಆಹಾರ ಉದ್ದಿಮೆ ಪ್ರೋತ್ಸಾಹಕ್ಕೆ ಸಂಬಂಧಿಸಿದಂತೆ ಬ್ಯಾಂಕರ್ಸ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಿರು ಆಹಾರ ಉದ್ದಿಮೆ ನಡೆಸಲು ಇಚ್ಛಿಸುವ ಜಿಲ್ಲೆಯ ಆಸಕ್ತರಿಗೆ ಅರಿವು-ನೆರವಿನ ಅಗತ್ಯವಿದೆ, ಈ ದಿಸೆಯಲ್ಲಿ ಅವರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು, ಆ ಮೂಲಕ ಹೆಚ್ಚು ಸಂಖ್ಯೆಯಲ್ಲಿ ಕಿರು ಆಹಾರ ಉದ್ಯಮಿಗಳು ಈ ಯೋಜನೆಯ ಲಾಭಪಡೆಯುವಂತೆ ಬ್ಯಾಂಕ್ ಅಧಿಕಾರಿಗಳು ಹಾಗೂ ಇಲಾಖೆಗಳು ಗಮನ ಹರಿಸಬೇಕು, ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆ (ಪಿ.ಎಂ.ಎಫ್.ಎಂ.ಇ) ಯಡಿ ಕೃಷಿ ಚಟುವಟಿಕೆಗಳು, ತೋಟಗಾರಿಕೆ ಹಾಗೂ ಮೀನುಗಾರಿಕೆಗೆ ಸಂಬಂಧಿಸಿದ ಕಿರು ಉದ್ದಿಮೆ ನಡೆಸಲು ಆಸಕ್ತರಿಗೆ ಉತ್ತೇಜನ ನೀಡಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಮೀನುಗಾರಿಕೆಗೆ ಹೆಚ್ಚಿನ ಆದ್ಯತೆ ಇದೆ, ಮೀನಿನ ವಿವಿಧ ಬಗೆಯ ಆಹಾರ ಉತ್ಪನ್ನಗಳಿಗೆ ಹೆಚ್ಚಿನ ಒತ್ತು ನೀಡಬಹುದಾಗಿದೆ, ಕಿರು ಆಹಾರ ಉದ್ದಿಮೆದಾರರು ಒಣ ಮೀನು, ಉಪ್ಪಿನಕಾಯಿ, ಚಿಪ್ಸ್, ಮೀನಿನ ಎಣ್ಣೆ, ಜ್ಯೂಸ್, ಮಾತ್ರೆ, ಮೀನಿನ ಚಟ್ನಿ ಪುಡಿ ಇನ್ನಿತರ ಉತ್ಪನ್ನಗಳನ್ನು ತಯಾರಿಸುವ ಬಗ್ಗೆ ಯೋಜನಾ ವರದಿಯನ್ನು ತಯಾರಿಸಿ ಬ್ಯಾಂಕ್‍ಗಳಿಗೆ ಸಲ್ಲಿಸಿದ್ದಲ್ಲೀ, ಅದರ ಆಧಾರದಲ್ಲಿ ಬ್ಯಾಂಕುಗಳು ಸಾಲಸೌಲಭ್ಯ ನೀಡುತ್ತವೆ, ಈ ಯೋಜನೆಯಡಿ ಮುಖ್ಯವಾಗಿ ಗರಿಷ್ಠ 10 ಲಕ್ಷ ರೂ.ಗಳ ಸಾಲ ಸೌಲಭ್ಯವನ್ನು ಹಾಗೂ ಶೇ.50ರಷ್ಟು ಸಬ್ಸಿಡಿ ಪಡೆಯಬಹುದಾಗಿದೆ ಎಂದು ತಿಳಿಸಿದರು.

ಕಿರು ಆಹಾರ ಉದ್ದಿಮೆಯಡಿ ಯುವಕರಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಅಗತ್ಯತೆಯ ಬಗ್ಗೆ ತಿಳಿಸಿದ ಡಾ. ಕುಮಾರ್ ಅವರು, ಈಗಾಗಲೇ ಸಂಬಂಧಪಟ್ಟ ಇಲಾಖೆಗಳಿಗೆ ಹಾಗೂ ಬ್ಯಾಂಕ್‍ಗಳಿಗೆ ಕಿರು ಆಹಾರ ಉದ್ದಿಮೆಯಡಿ ಅಗತ್ಯ ನೆರವು ನೀಡಲು ಗುರಿಯನ್ನು ನಿಗದಿ ಪಡಿಸಲಾಗಿದೆ, ಆಸಕ್ತರು ಸಲ್ಲಿಸುವ ಯಾವುದೇ ಅರ್ಜಿಯನ್ನು ತಿರಸ್ಕರಿಸುವಂತಿಲ್ಲ, ಸಲ್ಲಿಸಿರುವ ಅರ್ಜಿಯಲ್ಲಿ ಯಾವುದೇ ಲೋಪದೋಷಗಳಿದ್ದಲ್ಲೀ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರುವಂತೆ ಸೂಚಿಸಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸೀತಾ ಎಂ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಎಚ್.ಆರ್. ನಾಯಕ್, ನಬಾರ್ಡ್‍ನ ಸಹಾಯಕ ಜನರಲ್ ಮ್ಯಾನೇಜರ್ ಸಂಗೀತಾ, ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರವೀಣ್ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು, ವಿವಿಧ ಬ್ಯಾಂಕುಗಳ ಮ್ಯಾನೇಜರ್‍ಗಳು ಹಾಗೂ ಇತರರು ಸಭೆಯಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು