4:43 PM Monday12 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಹಿಜಾಬ್:  ಶುಕ್ರವಾರ, ರಂಜಾನ್ ತಿಂಗಳಲ್ಲಿ ಧರಿಸಲು ಅನುಮತಿ ನೀಡಲು ಹೈಕೋರ್ಟ್ ಗೆ ಮತ್ತೆ ಅರ್ಜಿ

18/02/2022, 12:34

ಬೆಂಗಳೂರು(reporterkarnataka.com)

ಹಿಜಾಬ್ ಕುರಿತು ಹೈಕೋರ್ಟ್  ಮಧ್ಯಂತರ ಆದೇಶ ನಡುವೆ ಶುಕ್ರವಾರ ಮತ್ತು ಪವಿತ್ರ ರಂಜಾನ್ ತಿಂಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಕರ್ನಾಟಕ ಹೈಕೋರ್ಟ್ ನಲ್ಲಿ ಹೊಸ ಅರ್ಜಿ ಸಲ್ಲಿಸಲಾಗಿದೆ.

ಅರ್ಜಿದಾರ ಡಾ.ವಿನೋದ್ ಕುಲಕರ್ಣಿ, ಮಧ್ಯಂತರ ಆದೇಶದ ಭಾಗವಾಗಿ ಮುಸ್ಲಿಂ ಹುಡುಗಿಯರು ಕನಿಷ್ಠ ಶುಕ್ರವಾರ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಶುಕ್ರವಾರ ಮುಸ್ಲಿಮರಿಗೆ ಅತ್ಯಂತ ಮಂಗಳಕರ ದಿನವಾದ ಸಮಯದಲ್ಲಿ ಹಾಗೂ ರಂಜಾನ್ ತಿಂಗಳಲ್ಲಿ ಹಿಜಾಬ್‌ ಧರಿಸಲು ಅವಕಾಶ ಮಾಡಿ ಆದೇಶ ಹೊರಡಿಸಬೇಕು ಎಂದು ಮನವಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಇನ್ನು ಹೈಕೋರ್ಟ್ ಅಂತಿಮವಾಗಿ ತೀರ್ಪು ನೀಡುವವರೆಗೂ ಈ ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ ಅಥವಾ ಕೇಸರಿ ಶಾಲುಗಳನ್ನು ಧರಿಸುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ತೀರ್ಪಿನಲ್ಲಿ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು