10:54 AM Tuesday16 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಮಾಜಿ ಸಚಿವ ಪ್ರಮೋದ್ ಮಧ್ವರಾಜ್  ಬಿಜೆಪಿ ಸೇರ್ಪಡೆಗೆ ನನ್ನ ವಿರೋಧವಿಲ್ಲ: ಶಾಸಕ ರಘುಪತಿ ಭಟ್

19/02/2022, 08:49

ಉಡುಪಿ(reporterkarnataka.com): ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಗೆ ಈಗ ಬಿಜೆಪಿಯ ಬಾಗಿಲು ತೆರೆದಿದೆ. ಅವರು ಪಕ್ಷಕ್ಕೆ ಬಂದರೆ ಸ್ವಾಗತ ಮಾಡುತ್ತೇನೆ ಎಂದು ಉಡುಪಿ ಬಿಜೆಪಿ ಶಾಸಕ ಕೆ. ರಘುಪತಿ‌ ಭಟ್ ಹೇಳಿದರು.

ಉಡುಪಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2018ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪ್ರಮೋದ್ ಸೇರ್ಪಡೆಗೆ ನಾನು ವಿರೋಧ ವ್ಯಕ್ತಪಡಿಸಿದ್ದು ನಿಜ. ನಾನು ಉಡುಪಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಕಾರಣ, ನನ್ನ ಸ್ಥಾನಕ್ಕೆ ಕುತ್ತು ಬರಬಹುದೆಂಬ ನಿಟ್ಟಿನಿಂದ ಸ್ವಭಾವಿಕವಾಗಿ ವಿರೋಧ ಮಾಡಿದ್ದೇನು. ಆಗಲೂ ಪಕ್ಷಕ್ಕೆ ಸೇರ್ಪಡೆಗೆ ನನ್ನ‌ ಅಭ್ಯಂತರ ಇರಲಿಲ್ಲ‌. ಆದರೆ, ಅಭ್ಯರ್ಥಿ ಮಾಡುವುದಕ್ಕೆ ನನ್ನ ವಿರೋಧ ಇತ್ತು ಎಂದು ತಿಳಿಸಿದ್ದಾರೆ.

ಬೇರೆ ಪಕ್ಷದ ನಾಯಕನ ಆಗಮನದಿಂದ ಪಕ್ಷ ಬಲವರ್ಧನೆ ಆಗುತ್ತದೆ ಎಂದಾದರೆ ನನಗೆ ಸಂತೋಷವೇ. ಈಗ ನನ್ನ ಬುಡ ಗಟ್ಟಿಯಾಗಿದೆ‌. ಯಾವುದೇ ನಾಯಕರ ಸೇರ್ಪಡೆಗೆ ನಾನು ವಿರೋಧ ಮಾಡಲ್ಲ. ಪಕ್ಷದ ಸಿದ್ಧಾಂತ ಒಪ್ಪಿ ಬರುವುದಾರೆ ಸ್ವಾಗತ ಎಂದರು.

ಎಲ್ಲ ಶಾಸಕರು ಪಕ್ಷದ ಜೊತೆಗೆ ಅವರ ಬುಡ ಗಟ್ಟಿ ಮಾಡಲು ನೋಡುವುದು ಸಹಜ..ಅದರಲ್ಲಿ ಎರಡು ಮಾತಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು