10:54 AM Tuesday16 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಪದವಿ ಕಾಲೇಜಿನ ಹಿಜಾಬ್ ವಿವಾದ: ವಿದ್ಯಾರ್ಥಿ  ಮುಖಂಡರ ಜತೆ ಪ್ರತಿಪಕ್ಷ ಉಪ ನಾಯಕ ಯು.ಟಿ.ಖಾದರ್ ಸಚಿವ ಡಾ.ಅಶ್ವತ್ಥ ನಾರಾಯಣ ಭೇಟಿ

19/02/2022, 10:30

ಬೆಂಗಳೂರು(reporterkarnataka.com): ನ್ಯಾಯಾಲಯದ ಸ್ಪಷ್ಟ ಆದೇಶವಿದ್ದರೂ ಕೆಲವು ಪದವಿ ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸುತ್ತಿರುವ ಬಗ್ಗೆ ವಿದ್ಯಾರ್ಥಿ ಸಂಘಟನೆಗಳ ಮುಖಂಡರೊಂದಿಗೆ ಸಚಿವ ಅಶ್ವತ್ಥ ನಾರಾಯಣ ಅವರನ್ನು ಪ್ರತಿಪಕ್ಷ ಉಪ ನಾಯಕ ಶಾಸಕ ಯು.ಟಿ.ಖಾದರ್ ಭೇಟಿ ಮಾಡಿ ಮಾತುಕತೆ ನಡೆಸಿದರು.


ಈ ಸಂದರ್ಭದಲ್ಲಿ ಸಚಿವ  ಅಶ್ವತ್ಥ ನಾರಾಯಣ ರವರು ನಿರ್ದಿಷ್ಟ ಸಮವಸ್ತ್ರ ನಿಗದಿಪಡಿಸದ ಎಲ್ಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಹಿಜಾಬ್ ಗೆ ಸಂಬಂಧಿಸಿದಂತೆ ಯಾವುದೇ ಗೊಂದಲ ಮೂಡಿಸಬಾರದೆಂದು ಸ್ಪಷ್ಟವಾಗಿ ತಿಳಿಸಿದ್ದು ಕೆಲವು CBSE ಕಾಲೇಜುಗಳಲ್ಲಿ ಅಲ್ಲಿನ ಆಡಳಿತ ಮಂಡಳಿಯು ಸಮವಸ್ತ್ರ ನಿಗದಿಪಡಿಸಿದ್ದಲ್ಲಿ ಕೋರ್ಟ್ ಆದೇಶವನ್ನು ಪರಿಗಣಿಸಿ ವ್ಯವಸ್ಥಿತ ರೀತಿಯಲ್ಲಿ ಎಲ್ಲರೂ ಸೌಹಾರ್ದಯುತವಾಗಿ ಕಾನೂನನ್ನು ಗೌರವಿಸುವ ಕೆಲಸ ಮಾಡಬೇಕೆಂದು ಅವರು ತಿಳಿಸಿದರು.

ಕಾಲೇಜು ಅಥವಾ ಶಾಲಾ ಗೇಟುಗಳಲ್ಲಿ ಯಾವುದೇ ವಿದ್ಯಾರ್ಥಿಗಳನ್ನು ತಡೆಯುವಂತಿಲ್ಲ. ಕಾಲೇಜು ಅಥವಾ ಶಾಲಾ ಆವರಣದಲ್ಲಿ ಹಿಜಾಬ್ ಧರಿಸಬಹುದಾಗಿಯೂ, ಅಲ್ಲದೇ ಶಿಕ್ಷಕಿಯರು ಹಾಗೂ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂಬುದಾಗಿ ಸ್ಪಷ್ಟವಾಗಿ ತಿಳಿಸಿದರು.

ನಂತರ ಯು.ಟಿ.ಖಾದರ್ ನೇತೃತ್ವದ ಶಾಸಕರ ನೀಯೋಗ ಶಿಕ್ಷಣ ಸಚಿವ ನಾಗೇಶ್ ಅವರನ್ನು ಭೇಟಿ ಮಾಡಿ ಕೂಡಾ ಹಿಜಾಬ್ ವಿವಾದದ ಬಗ್ಗೆ ಮಾತುಕತೆ ನಡೆಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು