11:06 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ವಿಜೃಂಭಣೆಯಿಂದ ನಡೆದ ತಿರುವೈಲೋತ್ಸವ ; ಸಂಕುಪೂಂಜ ದೇವುಪೂಂಜ ಕರೆಯಲ್ಲಿ ಕಳೆ ಕಟ್ಟಿದ ಕಂಬಳದ ಸಂಭ್ರಮ

19/02/2022, 22:48

ಗಣೇಶ್ ಅದ್ಯಾಪಾಡಿ ಮಂಗಳೂರು

ಮಂಗಳೂರು(Reporterkarnataka.com)ದೇವರು ನೋಡುವ ಕಂಬಳ ಎಂದೇ ಖ್ಯಾತಿ ಪಡೆದ ವಾಮಂಜೂರು ತಿರುವೈಲು ಗುತ್ತು ಸಂಕುಪೂಂಜ ದೇವುಪೂಂಜ ಜೋಡುಕೆರೆ ಕಂಬಳ ಟ್ರಸ್ಟ್ ನೇತೃತ್ವದಲ್ಲಿ ತುಳುನಾಡಿನ ಕಂಬಳ ತಿರುವೈಲೋತ್ಸವಕ್ಕೆ ಶನಿವಾರ ಚಾಲನೆ ನೀಡಲಾಯಿತು.


ಶಾರದಾ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಎಂ.ಬಿ.ಪುರಾಣಿಕ್ ಅವರು ಕಂಬಳವನ್ನು ಉದ್ಘಾಟಿಸಿದರು. ಕರಾವಳಿ ಎಜುಕೇಶನ್ ಟ್ರಸ್ಟ್ ಮುಖ್ಯಸ್ಥರಾದ ಗಣೇಶ್ ರಾವ್ ಅಧ್ಯಕ್ಷತೆ ವಹಿಸಿದ್ದರು. ಗೋಳಿದಡಿ ಗುತ್ತು ಗಡಿಕಾರರಾದ ವರ್ಧಮಾನ್ ದುರ್ಗಾಪ್ರಸಾದ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಎಸ್.ಮಂಜುನಾಥ ಭಂಡಾರಿ, ಮರೋಳಿ ಶ್ರೀ ಸೂರ್ಯನಾರಾಯಣ ದೇವಾಲಯದ ಅಧ್ಯಕ್ಷರಾದ ಗಣೇಶ್ ಶೆಟ್ಟಿ, ಉದ್ಯಮಿ ನಿತಿನ್ ಶೆಟ್ಟಿ, ಕಾರ್ಪೋರೇಟರ್ ಹೇಮಲತಾ ರಘು ಸಾಲ್ಯಾನ್ ತಿರುವೈಲುಗುತ್ತು ಕಂಬಳ ಸಮಿತಿ ಗೌರವಾಧ್ಯಕ್ಷ ಮಿಥುನ್ ರೈ, ಅಧ್ಯಕ್ಷ ನವೀನ್ ಚಂದ್ರ ಆಳ್ವ, ಕಾರ್ಯಾಧ್ಯಕ್ಷ ಪ್ರವೀಣ್ ಚಂದ್ರ ಆಳ್ವ ಮೊದಲಾದವರು ಉಪಸ್ಥಿತರಿದ್ದರು.



ವಾಮಂಜೂರು ತಿರುವೈಲು ಶ್ರೀ ಅಮೃತೇಶ್ವರ ದೇವಾಲಯದ ಎದುರಿನ ಕಂಬಳ ಗದ್ದೆಯಲ್ಲಿ ನಡೆಯುತ್ತಿರುವ ಈ ಕಂಬಳೋತ್ಸವದಲ್ಲಿ 160 ಜೋಡಿ ಕೋಣಗಳು ಭಾಗವಹಿಸುವ ನಿರೀಕ್ಷೆ ಇದೆ.
ಪಾಲಿಕೆ ವ್ಯಾಪ್ತಿಯಲ್ಲಿದ್ದರೂ ತುಳು ನಾಡಿನ ಘಮಲನ್ನು ಉಳಿಸಿಕೊಂಡು ಸಾಂಪ್ರಾದಾಯಿಕವಾಗಿ ನಡೆಸಿಕೊಂಡು ಬರಲಾಗುತ್ತಿದೆ.


ಕಳೆದ ಹತ್ತು ವರ್ಷಗಳಿಂದ ತಿರುವೈಲೋತ್ಸವ ವಿಜೃಂಭಣೆಯಿಂದ ನಡೆದುಕೊಂಡು ಬರುತ್ತಿದು ಕೊರೊನಾ ಹಾಗೂ ಇನ್ನಿತರ ಎಡರು ತೊಡರುಗಳ ನಡುವೆ ಮತ್ತೊಮ್ಮೆ ಸಂಕುಪೂಂಜ ದೇವುಪೂಂಜ ಕರೆಗಳು ಕಳೆ ಕಟ್ಟಿದು ತುಳು ನಾಡ ಮಣ್ಣಿನ ಪರಿಮಳವನ್ನು ನಾಡಿನಾದ್ಯಂತ ಪಸರಿಸುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು