9:10 PM Wednesday16 - July 2025
ಬ್ರೇಕಿಂಗ್ ನ್ಯೂಸ್
ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ

ಇತ್ತೀಚಿನ ಸುದ್ದಿ

ಕೊಡಗು ಜೂನಿಯರ್ ಕಾಲೇಜಿನಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ: ಪ್ರಿನ್ಸಿಪಾಲರ ವಿರುದ್ಧ ದೂರು ದಾಖಲು

20/02/2022, 10:22

ಮಡಿಕೇರಿ(reporterkarnataka.com): ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರಗೊಂಡ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗಿರುವ ವಿಷಯಕ್ಕೆ ಸಂಬಂಧಿಸಿದಂತೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಟಿವಿ ಮಾಧ್ಯಮದ ಪ್ರತಿನಿಧಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಕ್ಕಳ ಹಕ್ಕುಗಳ ಕಲ್ಯಾಣ ಸಮಿತಿಗೆ ಮಡಿಕೇರಿಯ ಮುಸ್ಲಿಂ ಜಮಾಅತ್ ಗಳ ಒಕ್ಕೂಟದಿಂದ ದೂರು ನೀಡಲಾಗಿದೆ.

ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದ ವಿದ್ಯಾರ್ಥಿನಿಯರನ್ನು ಕಾಲೇಜಿನ ಪ್ರಾಂಶುಪಾಲರು ಟಿವಿ ಕ್ಯಾಮೆರಾಗಳ ಮುಂದೆ ಏರು ಧ್ವನಿಯಲ್ಲಿ ಗದರಿಸಿ, ಎಫ್ ಐಆರ್ ದಾಖಲಿಸುವ ಬೆದರಿಕೆಯನ್ನು ಹಾಕಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಗೊಂಡ ದೃಶ್ಯದಲ್ಲಿ, ಅಪ್ರಾಪ್ತ ವಿದ್ಯಾರ್ಥಿಗಳಿಗೆ ಮಾನಸಿಕ ತೊಂದರೆಯಾಗುವಂತೆ ಚಿತ್ರೀಕರಿಸಿರುವುದು ಸ್ಪಷ್ಟವಾಗಿದ್ದು, ಇದು ಜೆ.ಜೆ ಕಾಯ್ದೆ ಪ್ರಕಾರ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗಿದೆ. ಈ ಘಟನೆಯನ್ನು ಚಿತ್ರೀಕರಿಸಲು ಅವಕಾಶ ಮಾಡಿಕೊಟ್ಟು, ಸಾರ್ವಜನಿಕವಾಗಿ ಮಕ್ಕಳ ಹಕ್ಕುಗಳಿಗೆ ಚ್ಯುತಿ ತಂದಿರುವ ಸದರಿ ವ್ಯಕ್ತಿಯ ವಿರುದ್ಧ ಹಾಗೂ ಅದನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಪ್ರಚಾರ ಮಾಡಿರುವ ಟಿವಿ ಸಂಸ್ಥೆಯ ಪ್ರತಿನಿಧಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಕಾನೂನು ಕ್ರಮ ಜರುಗಿಸಲು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು