10:23 PM Monday10 - November 2025
ಬ್ರೇಕಿಂಗ್ ನ್ಯೂಸ್
Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:…

ಇತ್ತೀಚಿನ ಸುದ್ದಿ

ಶಿವಮೊಗ್ಗದಲ್ಲಿ ಯುವಕನ ಹತ್ಯೆ: 24 ತಾಸಿನೊಳಗೆ ಇಬ್ಬರು ಆರೋಪಿಗಳ ಬಂಧನ; ಅಂತಿಮ ಯಾತ್ರೆ ವೇಳೆ ಹಿಂಸಾಚಾರ, ಕಲ್ಲು ತೂರಾಟ

21/02/2022, 15:35

ಶಿವಮೊಗ್ಗ (reporterkarnataka.com) : ಶಿವಮೊಗ್ಗದಲ್ಲಿ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 24 ತಾಸಿನೊಳಗೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ನಡುವೆ ಹತ್ಯೆಗೀಡಾದ ಯುವಕನ ಅಂತಿಮ ಯಾತ್ರೆ ವೇಳೆ ಹಿಂಸಾಚಾರ ನಡೆದಿದ್ದು, ಕಲ್ಲು ತೂರಾಟ ನಡೆಸಲಾಗಿದೆ.

ಪೊಲೀಸ್ ಬಿಗಿ ಬಂದೋಬಸ್ತ್ ನಲ್ಲಿ ಪಾರ್ಥಿವ ಶರೀರದ ಮೆರವಣಿಗೆ ನಡೆದಿತ್ತು. ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಸಿದ ಹಿನ್ನೆಲೆಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.

ನಗರದ ಭಾರತಿ ಕಾಲನಿಯಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷ ಎಂಬ ಯುವಕನನ್ನು ಕಳೆದ ರಾತ್ರಿ ಇರಿಯಲಾಗಿತ್ತು.


ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಯುವಕನನ್ನು ತಕ್ಷಣ ದಾಖಲಾಯಿಸಿತಾದರೂ ಅಷ್ಟೊತ್ತಿಗೆ ಆತನ ಅಸುನೀಗಿದ್ದ. ಈ ನಡುವೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂರೆ ಒಬ್ಬ ಆರೋಪಿಯನ್ನು ಪೊಲೀಸರು ಸೋಮವಾರ ಬೆಳಗ್ಗೆ ಬಂಧಿಸಿದ್ದಾರೆ. ಕೊಲೆ ಪ್ರಕರಣದಲ್ಲಿ ಯಾರೆಲ್ಲಾ ಇದ್ದಾರೆ, ಯಾವ ಕಾರಣಕ್ಕಾಗಿ ಈ ಕೊಲೆ ನಡೆದಿದೆ ಹೀಗೆ ಎಲ್ಲಾ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು