ಇತ್ತೀಚಿನ ಸುದ್ದಿ
ಸುಳ್ಯ: ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಸಾವು: ಬಾಲಕಿ ಇಲಿ ಪಾಷಣ ಸೇವಿಸಿದ್ದಳೇ?
21/02/2022, 15:52

ಸುಳ್ಯ(reporterkarnataka.com): ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿದ್ದ ಅಪ್ರಾಪ್ತ ವಯಸ್ಸಿನ
ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಸುಳ್ಯದ ಮರ್ಕಂಜದಲ್ಲಿ ನಡೆದಿದೆ.
ಸುಳ್ಯ ತಾಲೂಕು ಮರ್ಕಂಜ ಗ್ರಾಮದ ಬೇರಿಕೆ ರಮೇಶ ಎಂಬವರ ಪುತ್ರಿ ಶ್ರಾವ್ಯ (17) ಎಂಬಾಕೆಯೆ ಸಾವನ್ನಪ್ಪಿದ ವಿದ್ಯಾರ್ಥಿನಿ. ಪುತ್ತೂರಿನ ಖಾಸಗಿ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಈಕೆ ವಾರದ ಹಿಂದೆ ಮರ್ಕಂಜದ ತನ್ನ ಮನೆಗೆ ಬಂದಿದ್ದಳು. ಮನೆಯಲ್ಲಿ ಯಾರು ಇಲ್ಲದ ವೇಳೆ ಇಲಿ ಪಾಷಣ ಸೇವಿಸಿದ್ದಳೆಂದು ಹೇಳಲಾಗುತ್ತಿದೆ. ಮನೆಯವರಿಗೆ ವಿಷಯ ತಿಳಿದು ಆಕೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು.
ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಆಕೆ ನಿನ್ನೆ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ. ಇಲಿ ಪಾಷಾಣ ಸೇವಿಸಿರುವುದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.