ಇತ್ತೀಚಿನ ಸುದ್ದಿ
ಗೃಹ ಸಚಿವರ ಜಿಲ್ಲೆಯಲ್ಲೇ ಕೊಲೆಯಾಗಿದೆ ಅಂದ್ರೆ ಏನರ್ಥ: ಸದನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ
21/02/2022, 20:22
ಬೆಂಗಳೂರು(reporterkarnataka.com): ಗೃಹ ಸಚಿವರ ಶಿವಮೊಗ್ಗ ಜಿಲ್ಲೆಯಲ್ಲೇ ಕೊಲೆಯಾಗಿದೆ ಅಂದರೆ ಏನು ಅರ್ಥ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಮೊದಲು ಆರೋಪಿಗಳನ್ನು ಬಂಧಿಸಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ವಿಧಾನಸೌಧದಲ್ಲಿ ಹೇಳಿಕೆ ನೀಡಿದ ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ, ಕೊಲೆ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗಬೇಕು. ಕೊಲೆ ಆರೋಪಿಗಳಿಗೆ ಕಠಿಣವಾದ ಶಿಕ್ಷೆಯಾಗಬೇಕು. ಸುಮ್ಮನೆ ಇಲ್ಲಿ ಕುಳಿತು ಹೇಳಿಕೆಗಳನ್ನು ನೀಡಬಾರದು ಅಂತ ಹೇಳಿದರು.