9:05 PM Saturday16 - May 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಗುಪ್ತಚರ ವ್ಯವಸ್ಥೆ ಸಂಪೂರ್ಣ ವಿಫಲ: ಮಾಜಿ ಸಿಎಂ ಕುಮಾರಸ್ವಾಮಿ ಗರಂ

21/02/2022, 23:40

ಬೆಂಗಳೂರು(reporterkarnataka.com): ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಗೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಜೆಡಿಎಸ್ ಮುಖಂಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ರಾಜ್ಯದಲ್ಲಿ ಗುಪ್ತಚರ ವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಾಂತಿ ಕಾಪಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಂದು ಆರೋಪಿಸಿದರು. ಹಿಜಾಬ್, ಕೇಸರಿ ಶಾಲು ಗಲಾಟೆ ಇಡೀ ರಾಜ್ಯಕ್ಕೆ ವ್ಯವಸ್ಥಿತವಾಗಿ ಹಬ್ಬಿದಾಗಲೇ ಅಮಾಯಕ ಮಕ್ಕಳನ್ನು ಬಲಿ ನೀಡುವ ಹುನ್ನಾರ ನಡೆದಿದೆ ಎಂಬ ಸಂಶಯ ಉಂಟಾಗಿತ್ತು. ಶಿವಮೊಗ್ಗದಲ್ಲಿ ನಡೆದ ಕೊಲೆಯೂ ಈ ಷಡ್ಯಂತ್ರದ ಒಂದು ಭಾಗ ಎಂಬ ಅನುಮಾನವಿದೆ ಎಂದು ಅವರು ಹೇಳಿದರು. ಈಗ ಶಿವಮೊಗ್ಗದಲ್ಲಿ ಅಶಾಂತಿ ಉಂಟಾಗಿದೆ. ಸರಕಾರ ಇದನ್ನು ಅರ್ಥ ಮಾಡಿಕೊಳ್ಳಬೇಕು. ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವ ಕೃತ್ಯಗಳಿಗೆ ಸೂಕ್ತ ಕಡಿವಾಣ ಹಾಕಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು