1:06 AM Friday18 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ವಿವಾದಿತ ಹೇಳಿಕೆ ಕುರಿತು ಈಶ್ವರಪ್ಪರ ಕರೆಸಿ ಛೀಮಾರಿ ಹಾಕುವೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ

22/02/2022, 14:19

ಹೊಸದಿಲ್ಲಿ(reporterkarnataka.com):

ರಾಷ್ಟ್ರಧ್ವಜದ ಬದಲಿಗೆ ಭಗವಾಧ್ವಜವೇ ರಾಷ್ಟ್ರಧ್ವಜ ಆಗಬಹುದು ಎಂದು ವಿವಾದಿತ ಹೇಳಿಕೆ ನೀಡಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಕರೆಸಿ ಛೀಮಾರಿ ಹಾಕುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ.

ಇಂಡಿಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ನಡ್ಡಾ ಅವರು, “ನಾನು ಈಶ್ವರಪ್ಪ ಅವರಿಗೆ ಕರೆ ಮಾಡಿ ಕೇಸರಿ ಧ್ವಜದ ಕುರಿತ ಅವರ ಹೇಳಿಕೆಗಾಗಿ ಅವರನ್ನು ಬೈದಿದ್ದೇನೆ” ಎಂದು ಹೇಳಿದ್ದಾರೆ.

ಭಗವಾಧ್ವಜ ರಾಷ್ಟ್ರಧ್ವಜವಾಗಲು ಸಾಧ್ಯವೆ ಇಲ್ಲ. ಇಂತಹ ಮಾತಗಳನ್ನು ಆಡಬಾರದು. ಇಂತಹ ವಿಷಯಗಳಲ್ಲಿ ನಾನು ತಡ ಮಾಡುವುದೇ ಇಲ್ಲ. ನಾವು ಕಾನೂನಿನ ಆಧಾರದಲ್ಲಿ ನಡೆದುಕೊಳ್ಳುವ ಜನ. ಸಂವಿಧಾನವನ್ನು ಒಪ್ಪುವವರು, ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿ ಇರುವವರು. ನಾವು ರಾಷ್ಟ್ರೀಯವಾದಿಗಳು. ಇಂತಹ ತಪ್ಪು ಮಾಹಿತಿ, ಬೇಜವಾಬ್ದಾರಿ ಹೇಳಿಕೆಗಳನ್ನು ನಾವು ಸಹಿಸುವುದಿಲ್ಲ. ಕ್ಷಮೆ ಇರಲಿ ಎಂದು ನುಡಿದಿದ್ದಾರೆ.

ಶಿವಮೊಗ್ಗದಲ್ಲಿ ಬಿಜೆಪಿ ಬೆಂಬಲಿತ ವಿದ್ಯಾರ್ಥಿಗಳು ರಾಷ್ಟ್ರಧ್ವಜದ ಸ್ತಂಭದಲ್ಲಿ ಕೇಸರಿ ಧ್ವಜ ಹಾರಿಸಿರುವ ವಿವಾದದ ಬಗ್ಗೆ ಫೆಬ್ರವರಿ 9ರಂದು ಪ್ರತಿಕ್ರಿಯಿಸಿದ್ದ ಸಚಿವ  ಈಶ್ವರಪ್ಪ, “ಈ ದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಅವತ್ತು ಕೆಂಪು ಕೋಟೆಯ ಮೇಲೆ ಕೂಡಾ ಕೇಸರಿ ಧ್ವಜ ಹಾರಿಸುತ್ತೇವೆ. ಮುಂದೊಂದು ದಿನ ಭಗವಾಧ್ವಜವೇ ರಾಷ್ಟ್ರಧ್ವಜ ಆಗಬಹುದು” ಎಂದು ವಿವಾದಿತ ಹೇಳಿಕೆ ನೀಡಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು