ಇತ್ತೀಚಿನ ಸುದ್ದಿ
ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ಹೇಳಿಕೆ: ಅಥಣಿಯಿಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದೇನು?
07/06/2021, 14:35
ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು
ಮನಸ್ಸಿಗೆ ನೋವಾಗಿ ರಾಜೀನಾಮೆ ವಿಷಯ ಮಾತನಾಡಿದ್ದಾರೆ. ರಾಜ್ಯದಲ್ಲಿ ಕೆಲವರು ಅನೇಕ ದಿನಗಳಿಂದ ಪದೇ ಪದೇ ನಾಯಕತ್ವ ಬದಲಾವಣೆ ವಿಚಾರ ಮಾತನಾಡುತ್ತಿದ್ದಾರೆ. ಇದರಿಂದ ಸಿಎಂ ನೊಂದಿದ್ದಾರೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.
ಬೆಳಗಾವಿಯ ಅಥಣಿಯಲ್ಲಿ ಸೋಮವಾರ ಮಾಧ್ಯಮ ಜತೆ ಮಾತನಾಡಿದ ಅವರು, ಕೊರೊನಾ ಸಂದಿಗ್ಧ ಪರಿಸ್ಥಿತಿಯಲ್ಲಿ ಈ ವಿಷಯ ವಿನಾ ಕಾರಣ ಚರ್ಚೆ ಅಗುತ್ತಿದೆ. ಇದರಿಂ ಸಿಎಂ ಯಡಿಯೂರಪ್ಪನವರಿಗೆ ಬೇಜಾರಾಗಿ ರಾಜೀನಾಮೆ ವಿಷಯ ಮಾತನಾಡಿದ್ದಾರೆ ಎಂದರು.
ಉತ್ತರ ಕರ್ನಾಟಕದವರು ಸಿಎಂ ಆಗಬೇಕೆಂದು ಎಚ್ .ವಿಶ್ವನಾಥ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ. ಅವರ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧಿವಿಲ್ಲ. ನಮ್ಮದು ರಾಷ್ಟ್ರೀಯ ಪಕ್ಷ. ರಾಷ್ಟ್ರೀಯ ನಾಯಕರು ತೀರ್ಮಾನ ತಗೆದುಕೊಳ್ಳುತ್ತಾರೆ ಎಂದು ಸವದಿ ನುಡಿದರು.