5:53 PM Saturday23 - August 2025
ಬ್ರೇಕಿಂಗ್ ನ್ಯೂಸ್
ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ! Kodagu | ಸೋಮವಾರಪೇಟೆ: ಯುವಕನ ಆತ್ಮಹತ್ಯೆ; 3 ದಿನಗಳ ಹುಡುಕಾಟದ ಬಳಿಕ ಮೃತದೇಹ… ರಾಜ್ಯದ ಮೊದಲ ‘ವಿದೇಶ ಅಧ್ಯಯನ ಎಕ್ಸ್‌ಪೋ’ ಯಶಸ್ವಿ: 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು…

ಇತ್ತೀಚಿನ ಸುದ್ದಿ

ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ‘ವಿಜ್ಞಾನ ಸರ್ವತ್ರ ಪೂಜ್ಯತೆ’ಗೆ ಚಾಲನೆ: ವೈಜ್ಞಾನಿಕ ಮನೋಭಾವ ಬೆಳೆಸಲು ಜಿಲ್ಲಾಧಿಕಾರಿ ಕರೆ

23/02/2022, 12:47

ಮಂಗಳೂರು(reporterkarnataka.com): ಇಂದಿನ ಯುವಜನತೆ ವೈಜ್ಞಾನಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಕರೆ ನೀಡಿದರು.

ಪ್ರಧಾನ ಮಂತ್ರಿಗಳ ವೈಜ್ಞಾನಿಕ ಸಲಹಾ ಮಂಡಳಿ ಮತ್ತು ಸಂಸ್ಕøತಿ ಸಚಿವಾಲಯ, ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಕರ್ನಾಟಕ ವಿಜ್ಞಾನ ತಂತ್ರಜ್ಞಾನ ಅಕಾಡೆಮಿಯ ಸಹಭಾಗಿತ್ವದಲ್ಲಿ  ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ವಿಜ್ಞಾನ ಮಹಾಹಬ್ಬ ‘ವಿಜ್ಞಾನ ಸರ್ವತ್ರ ಪೂಜ್ಯತೇ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ನಿಶ್ಚಿತ ಗುರಿಯೊಂದಿಗೆ ಯುವ ಜನತೆ ಶೈಕ್ಷಣಿಕ ಬದುಕಿನಲ್ಲಿ ಮುನ್ನೆಡಯಬೇಕು, ನಮ್ಮ ಸುತ್ತಮುತ್ತಲಿನ ವಿಷಯಗಳ ಬಗ್ಗೆ ಪ್ರಶ್ನೇಗಳನ್ನಿಟ್ಟುಕೊಂಡು ಅವುಗಳಿಗೆ ವೈಜ್ಞಾನಿಕ ಉತ್ತರಗಳನ್ನು ಹುಡುಕುತ್ತಾ ಸಾಗಬೇಕು ಆ ಮೂಲಕ ಇಂದಿನ ಸ್ಪರ್ಧಾತ್ಮಕ ಜಗತ್ತಿನ ಸವಾಲುಗಳನ್ನು ಎದುರಿಸಬೇಕು ಎಂದು ಸಲಹೆ ನೀಡಿದರು.

ವೈಜ್ಞಾನಿಕ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳಿಗೆ ಪಿಲಿಕುಳ ವಿಜ್ಞಾನ ಪ್ರಾಧಿಕಾರ ಎಲ್ಲಾ ರೀತಿಯ ತರಬೇತಿಗಳನ್ನು ನೀಡಲು ಸಜ್ಜಾಗಿದೆ, ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಎನ್.ಐ.ಟಿ.ಕೆ ನಿರ್ದೇಶಕ ಪ್ರೊ. ಉದಯ ಕುಮಾರ್ ಆರ್ ಯರಗಟ್ಟಿ ಮಾತನಾಡಿ, ನಮ್ಮ ಅಖಂಡ ಭಾರತದ ಆರಂಭ ವಿಜ್ಞಾನದೊಂದಿಗೆ ಆಗಿದೆ. ಭಾರತೀಯ ವಿಜ್ಞಾನಿಗಳು ವೈಜ್ಞಾನಿಕ ಲೋಕಕ್ಕೆ ಅಗಾಧ ಕೊಡುಗೆಗಳನ್ನು ನೀಡಿದ್ದಾರೆ, ಯುವಜನತೆ ಆ ದಾರಿಯಲ್ಲಿ ಸಾಗಬೇಕು ಎಂದರು.

ಯುವಜನರಲ್ಲಿ ವೈಜ್ಞಾನಿಕ ಚಿಂತನೆಗಳನ್ನು ರೂಪಿಸಲು ಕೇಂದ್ರ ಸರ್ಕಾರ ವಿಜ್ಞಾನ ಪೂಜ್ಯತೆ ಎಂಬಂತಹ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ, ಪ್ರತಿಭಾನ್ವಿತ ಯುವಕರು ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬೇಕು ಮತ್ತು ದೇಶದ ಅತ್ಯುತ್ತಮ ಸಂಪನ್ಮೂಲ ವ್ಯಕ್ತಿಗಳಾಗಿ ಹೊರಹೊಮ್ಮಬೇಕು ಎಂಬುದೇ ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಮೇಯರ್ ಪ್ರೇಮಾನಂದ ಶೆಟ್ಟಿ, ಹಿಂದಿನ ಕಾಲದಲ್ಲಿ ಕನಿಷ್ಠ ಸೌಲಭ್ಯಗಳನ್ನು ಪಡೆದು ಗರಿಷ್ಠ ಸಾಧನೆ ಮಾಡಿದ ಮಹಾತ್ಮರನ್ನು ಇಂದಿನ ಯುವಕರು ಮಾದರಿಯನ್ನಾಗಿಸಿಕೊಂಡು ವೈಜ್ಞಾನಿಕ ಭಾವದೊಂದಿಗೆ ಮುನ್ನಡೆಯಬೇಕು ಎಂದರು.

ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಕೆ.ವಿ. ರಾವ್ ಮಾತನಾಡಿ, ಎಂಜಿನಿಯರಿಂಗ್ ಮತ್ತು ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳ ಸಮ್ಮುಖದಲ್ಲಿ ವಿಜ್ಞಾನದ ಈ ಕಾರ್ಯಕ್ರಮವು ಫೆ.28ರ ವರೆಗೆ ವೈವಿಧ್ಯಮಯವಾಗಿ ನಡೆಯಲಿದೆ,  ವಾರದ ಕೊನೆಯ ಎರಡು ದಿನಗಳಲ್ಲಿ ಇಸ್ರೋ ವತಿಯಿಂದ ಸುಸಜ್ಜಿತ ಬಸ್‍ನಲ್ಲಿ ಸ್ಪೇಸ್ ಆನ್ ವೀಲ್ಸ್ ಪ್ರದರ್ಶನ ನಡೆಯಲಿದೆ, ಅದರಲ್ಲಿ ಬಾಹ್ಯಾಕಾಶದ ತಂತ್ರಜ್ಞಾನದ ಬಗ್ಗೆ ಉತ್ತಮ ಮಾಹಿತಿ ಪಡೆಯಬಹುದಾಗಿದೆ, ಅದರೊಂದಿಗೆ ಪುಸ್ತಕ ಪ್ರದರ್ಶನವು ನಡೆಯಲಿದೆ ಎಂದರು.

ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ವೆಂಕಟೇಶ್ ಮತ್ತು ವಿವಿಧ ಕಾಲೇಜಿನ ವಿದ್ಯಾರ್ಥಿಗಳ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು