9:22 AM Sunday24 - August 2025
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ!

ಇತ್ತೀಚಿನ ಸುದ್ದಿ

ಹಿರಿಯಡಕ: ಪರೀಕ್ಷೆಯ ಭಯದಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ನೇಣಿಗೆ ಶರಣು

23/02/2022, 14:36

ಹಿರಿಯಡ್ಕ(reporterkarnataka.com): ಪರೀಕ್ಷೆಯ ಭಯದಿಂದ ಬಾಲಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ‌ ತಾಲೂಕಿನ ಬೊಮ್ಮರಬೆಟ್ಟು ಗ್ರಾಮದ ಕಾಜರಗುತ್ತು ರಸ್ತೆ ಎಂಬಲ್ಲಿ ನಡೆದಿದೆ.

ಬೊಮ್ಮರಬೆಟ್ಟು ಗ್ರಾಮದ ಕಾಜರಗುತ್ತು ರಸ್ತೆಯ ಕುಕ್ಕುದಕಟ್ಟೆ ನಿವಾಸಿ ಜಿಸಾನ್ ಆತ್ಮಹತ್ಯೆಗೆ ಮಾಡಿಕೊಂಡ ಬಾಲಕ. ಈತ ಮಣಿಪಾಲ ಎಂಜೆಸಿ ಕಾಲೇಜಿನಲ್ಲಿ 10ನೇ ತರಗತಿಯ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುತ್ತಿದ್ದನು. ಆದರೆ, ಕಳೆದ ಒಂದು ವಾರದಿಂದ ಶಾಲೆಗೆ ಸರಿಯಾಗಿ ಹೋಗದೆ ಮನೆಯಲ್ಲಿಯೇ ಇದ್ದನು. ಅಲ್ಲದೆ, ಫೆ.21ರಂದು ಪರೀಕ್ಷೆ ಇದ್ದು, ಅದಕ್ಕೂ ಹೋಗದೆ ಮನೆಯಲ್ಲಿಯೇ ಇದ್ದನು.‌ ಇದಕ್ಕೆ ತಾಯಿ ಆಕ್ಷೇಪ ವ್ಯಕ್ತಪಡಿಸಿದ್ದರು‌. ತಾಯಿ ಅಂದು ಬೆಳಿಗ್ಗೆ 9:15 ಕ್ಕೆ ಕೆಲಸಕ್ಕೆ ಹೋಗಿದ್ದರು. ಆಗ ಜಿಸಾನ್ ಮನೆಯಲ್ಲಿಯೇ ಇದ್ದನು. ಅವರು ಸಂಜೆ 6:15ಕ್ಕೆ ಕೆಲಸ ಮುಗಿಸಿ ಮನೆಗೆ ಬಂದಾಗ ಎದುರು ಬಾಗಿಲಿನ ಚಿಲಕ ಹಾಕಿದ್ದು, ಹಿಂದಿನ ಬಾಗಿಲಿನಿಂದ ಒಳಗೆ ಹೋಗಿ ನೋಡಿದಾಗ ಜಿಸಾನ್ ಮಲಗುವ ಕೋಣೆಯಲ್ಲಿ ಜಂತಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ ಪರೀಕ್ಷೆಯ ಭಯದಿಂದ ಅಥವಾ ಇನ್ಯಾವುದೋ ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು