10:32 AM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಮಂಗಳೂರು: ತ್ಯಾಜ್ಯ ವಿಂಗಡಿಸದ ಅಪಾರ್ಟ್ ಮೆಂಟಿಗೆ ಪಾಲಿಕೆಯಿಂದ ಬರೋಬ್ಬರಿ 53 ಸಾವಿರ ದಂಡ !

07/06/2021, 14:59

ಮಂಗಳೂರು(reporterkarnataka news): ಮಂಗಳೂರು ಮಹಾನಗರಪಾಲಿಕೆಯ ತ್ಯಾಜ್ಯ ವಿಂಗಡಣೆ ಆದೇಶ ಉಲ್ಲಂಘಿದ ಆರೋಪದ ಮೇಲೆ ನಗರದ ವಸತಿ ಸಂಕೀರ್ಣವೊಂದಕ್ಕೆ ಬರೋಬ್ಬರಿ 53 ಸಾವಿರ ರೂ. ದಂಡ ವಿಧಿಸಲಾಗಿದೆ.

ನಗರದ ಚಿಲಿಂಬಿಯ ಮಲರಾಯ ದೇವಸ್ಥಾನ ಸಮೀಪದ ಮಾರ್ಸ್ ಆ್ಯಂಡ್ ವೀನಸ್ ಅಪಾರ್ಟ್ ಮೆಂಟ್ ಗೆ 53 ಸಾವಿರ ರೂ. ದಂಡ ಹಾಕಲಾಗಿದೆ. ಅಪಾರ್ಟ್ ಮೆಂಟ್ ನ 106 ಫ್ಲ್ಯಾಟ್ ಗಳಿಗೆ ತಲಾ 500 ರೂಪಾಯಿಯಂತೆ 53 ಸಾವಿರ ರೂ. ದಂಡ ವಿಧಿಸಲಾಗಿದೆ. ಜೂನ್ 5ರಂದು ಪಾಲಿಕೆಯ ಅಧಿಕಾರಿಗಳು ದಂಡ ವಿಧಿಸಿ ರಶೀದಿ ನೀಡಿದ್ದಾರೆ. ದಂಡ ಕಟ್ಟಲು ವಿಫಲವಾದಲ್ಲಿ ನೀರು ಸರಬರಾಜು ಸ್ಥಗಿತಗೊಳಿಸುವುದಾಗಿ ಪಾಲಿಕೆ ಎಚ್ಚರಿಕೆ ನೀಡಿದೆ.

ಮಂಗಳೂರು ಮಹಾನಗರಪಾಲಿಕೆ ತನ್ನ ವ್ಯಾಪ್ತಿಯಲ್ಲಿ ಬರುವ 60 ವಾರ್ಡ್ ಗಳಲ್ಲಿ ಹಸಿ ಕಸ ಮತ್ತು ಒಣ ಕಸವನ್ನು ಪ್ರತ್ಯೇಕಿಸಿ ನೀಡುವಂತೆ ಸೂಚನೆ ನೀಡಿತ್ತು. ಇದು ಪಾಲಿಕೆ ವ್ಯಾಪ್ತಿಯ ಮನೆ, ಅಪಾರ್ಟ್ ಮೆಂಟ್, ವಾಣಿಜ್ಯ ಕಟ್ಟಡಗಳಿಗೆ ಅನ್ವಯವಾಗುತ್ತದೆ. ಶುಕ್ರವಾರ ಹೊರತುಪಡಿಸಿ ವಾರದ ಇತರ ಎಲ್ಲ ದಿನಗಳಲ್ಲಿ ಹಸಿ ಕಸ ಮತ್ತು ಶುಕ್ರವಾರ ಒಣ ಕಸ ನೀಡಲು ಅವಕಾಶ ಕಲ್ಪಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು