ಇತ್ತೀಚಿನ ಸುದ್ದಿ
ಶಿವಮೊಗ್ಗ ಕೊಲೆ ಪ್ರಕರಣ: ತನಿಖೆಯ ಆಧಾರದ ಮೇಲೆ ಮುಂದಿನ ಕ್ರಮ: ಮುಖ್ಯಮಂತ್ರಿ ಬೊಮ್ಮಾಯಿ
24/02/2022, 10:01
ಬೆಂಗಳೂರು(reporterkarnataka.com):
ಅವರು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಶಿವಮೊಗ್ಗದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವುದು ನಮ್ಮ ಆದ್ಯತೆಯಾಗಿದೆ. ಕರ್ಫ್ಯೂ ಸಹ ಜಾರಿಯಲ್ಲಿದೆ ಎಂದರು.
ಕಾಂಗ್ರೆಸ್ ಅನುಭವದ ಮಾತು:
ಇದು ಸರಕಾರಿ ಪ್ರಾಯೋಜಿತ ಮೆರವಣಿಗೆ, ಸೆಕ್ಷನ್ 144 ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯ ಮಂತ್ರಿಗಳು, ಕಾಂಗ್ರೆಸ್ ನವರು ಈ ಹಿಂದೆ ಸರಕಾರಿ ಪ್ರಾಯೋಜಿತ ಕೆಲಸಗಳನ್ನು ಮಾಡಿದ್ದಾರೆ. ಅದರ ಅನುಭವದಿಂದ ಆ ಮಾತುಗಳು ಆಡಿದ್ದಾರೆ ಲೇವಡಿ ಮಾಡಿದರು.
ದಿಲ್ಲಿ ಪ್ರಯಾಣದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸದ್ಯಕ್ಕೆ ದಿಲ್ಲಿ ಹೋಗುವ ಉದ್ದೇಶ ಇಲ್ಲ ಎಂದರು.