9:56 PM Wednesday15 - January 2025
ಬ್ರೇಕಿಂಗ್ ನ್ಯೂಸ್
ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ನಾಪತ್ತೆಯಾದ ಮಕ್ಕಳ ಪತ್ತೆಗೆ  ಕೈಗೊಂಡ ಕ್ರಮದ ತನಿಖಾ ವರದಿ ಕೊಡಿ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ

24/02/2022, 14:14

ಬೆಂಗಳೂರು(reporterkarnataka.com): ರಾಜ್ಯದ ವಿವಿಧ ಬಾಲ ಮಂದಿರಗಳಿಂದ ನಾಪತ್ತೆಯಾಗಿರುವ 141 ಮಕ್ಕಳನ್ನು ಪತ್ತೆ ಹಚ್ಚಲು ಯಾವೆಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂಬ ಕುರಿತು ಹಾಗೂ ಈವರೆಗೆ ನಡೆಸಿರುವ ತನಿಖೆಯ ಸಮಗ್ರ ಮಾಹಿತಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ.

ಈ ಕುರಿತಂತೆ ಕೋಲಾರದ ಸಾಮಾಜಿಕ ಕಾರ್ಯಕರ್ತ ಕೆ.ಸಿ.ರಾಜಣ್ಣ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿದಾರರ ಪರ ವಕೀಲ ಎಸ್. ಉಮಾಪತಿ ವಾದ ಆಲಿಸಿದ ಪೀಠ, ಪ್ರತಿವಾದಿಗಳಾದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಗೃಹ ಇಲಾಖೆ ಸೇರಿದಂತೆ ಪ್ರಕರಣದ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಮಾರ್ಚ್ 9ಕ್ಕೆ ಮುಂದೂಡಿತು.

ಅರ್ಜಿಯಲ್ಲಿ 2015-16 ರಿಂದ 2021 ರ ಅಕ್ಟೋಬರ್ ನಡುವೆ ರಾಜ್ಯದಲ್ಲಿ, ಸರಕಾರದ ಅಧೀನದಲ್ಲಿರುವ ಬಾಲ ಮಂದಿರಗಳಿಂದ ಒಟ್ಟು 420 ಮಕ್ಕಳು ನಾಪತ್ತೆಯಾಗಿದ್ದಾರೆ. ಈ ಕುರಿತಂತೆ ಆಯಾ ಪೊಲೀಸ್ ಠಾಣೆಗಳಲ್ಲಿ ಎಫ್‍ಐಆರ್ ಕೂಡ ದಾಖಲಾಗಿದೆ. ಆದರೆ, ನಾಪತ್ತೆಯಾದ ಮಕ್ಕಳಲ್ಲಿ 141 ಮಂದಿ ಈವರೆಗೆ ಪತ್ತೆಯಾಗಿಲ್ಲ. ಈ ಕುರಿತಂತೆ ಅರ್ಜಿದಾರರು ಮಾಹಿತಿ ಹಕ್ಕು ಕಾಯ್ದೆ ಅಡಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಮಾಹಿತಿ ಪಡೆದಿದ್ದಾರೆ. ಈ ವೇಳೆ ನಾಪತ್ತೆಯಾದ ಮಕ್ಕಳ ಕುರಿತಂತೆ ಪೊಲೀಸರು ತನಿಖೆ ನಡೆಸಿಲ್ಲ ಎಂಬುದು ತಿಳಿದು ಬಂದಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.

ಬಾಲ ನ್ಯಾಯ ಕಾಯ್ದೆ ಪ್ರಕಾರ ಪ್ರತಿಯೊಂದು ಪೊಲೀಸ್ ಠಾಣೆಯಲ್ಲೂ ಮಕ್ಕಳ ನಾಪತ್ತೆ ಪ್ರಕರಣಗಳಿಗಾಗಿ ಪ್ರತ್ಯೇಕ ಪೊಲೀಸ್ ಘಟಕ ಇರಬೇಕು. ಆದರೆ, ರಾಜ್ಯದಲ್ಲಿ ಅಂತಹ ವ್ಯವಸ್ಥೆ ಇಲ್ಲ. ಈ ನಿಟ್ಟಿನಲ್ಲಿ ಸರಕಾರಕ್ಕೆ ಅಗತ್ಯ ನಿರ್ದೇಶನಗಳನ್ನು ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು