12:54 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ರಷ್ಯಾ-ಉಕ್ರೇನ್ ಯುದ್ಧ ; ಉಕ್ರೇನ್‌ನಲ್ಲಿ ಸಿಲುಕಿರುವ ಮಂಗಳೂರಿನ ಇಬ್ಬರು ವಿದ್ಯಾರ್ಥಿಗಳು !

24/02/2022, 18:11

ಮಂಗಳೂರು
ReporterKarnataka.com

ಮಂಗಳೂರಿ‌ನ ದೇರೇಬೈಲ್ ನಿವಾಸಿ ಅನೈನಾ ಅನ್ನ ಅವರು ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದು, ಉಕ್ರೇನ್‌ನ ಖಾರ್ಕಿವ್ ನಗರದ ಗಡಿ ಭಾಗದಲ್ಲಿ ‌ನೆಲೆಸಿರೋ ಅನೈನಾ ಮಂಗಳೂರಿನಲ್ಲಿರೋ ತಾಯಿ ಸಂಧ್ಯಾ ಜೊತೆ ಫೋನ್ ಕರೆಯಲ್ಲಿ ಮಾತನಾಡಿದ್ದಾರೆ.
ಸದ್ಯ ಉಕ್ರೇನ್‌ನಲ್ಲಿ ಸುರಕ್ಷಿತ ಸ್ಥಳದಲ್ಲಿರೋ ಬಗ್ಗೆ ಹೆತ್ತವರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಇನ್ನೂ ಉಕ್ರೇನ್‌ ನಲ್ಲಿ ಸಿಲುಕಿರುವ ಮತ್ತೋರ್ವ ಮಂಗಳೂರು ಪಡೀಲು ನಿವಾಸಿ ಕ್ಲಾಟನ್ ಅವರು ಸದ್ಯಕ್ಕೆ ಯಾವುದೇ ರೀತಿ ತೊಂದರೆ ಇಲ್ಲ ಎಂಬ ಸಂದೇಶ ರವಾನೆ ಮಾಡಿದ್ದಾರೆ.

ಜತೆಗೆ ಉಕ್ರೇನ್ ವಿದ್ಯಾರ್ಥಿ ಪೋಷಕರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರನ್ನು ಸಂಪರ್ಕಿಸಿದ್ದಾರೆ. ಕ್ಲಾಟನ್ ಇರುವ ಕಡೆಯಿಂದ ನೂರಾರು ಕಿಲೋಮೀಟರ್ ದೂರದಲ್ಲಿ ಏರ್ ಬಾಂಬುಗಳು ಅಟ್ಯಾಕ್ ಆಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಸದ್ಯಕ್ಕೆ ವಿದ್ಯಾರ್ಥಿ ಮತ್ತು ಮತ್ತೋರ್ವ ವಿದ್ಯಾರ್ಥಿನಿ ಇರುವ ಕಡೆ ಯಾವುದೇ ತೊಂದರೆ ಇಲ್ಲ ಎಂದು ಮಂಗಳೂರು ಮೂಲದ ವಿದ್ಯಾರ್ಥಿಗಳು ಮಾಹಿತಿ ನೀಡಿದ್ದಾರೆ. ಉಕ್ರೆನ್ ನಲ್ಲಿ ವೈದ್ಯಕೀಯ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿ ಕ್ಲಾಟನ್ ಪೋಷಕರಿಗೆ ಕರೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು