3:18 AM Tuesday7 - January 2025
ಬ್ರೇಕಿಂಗ್ ನ್ಯೂಸ್
ದೇಶದ ವೈವಿಧ್ಯತೆ, ಸೌಹಾರ್ದತೆ ಉಳಿಸಿಕೊಳ್ಳುವ ಮೂಲಕ ಆಂತರಿಕವಾಗಿ ಸಶಕ್ತವಾಗಬೇಕಿದೆ: ಧರ್ಮಸ್ಥಳದಲ್ಲಿ ಉಪ ರಾಷ್ಟ್ರಪತಿ… 60% ಕಮೀಷನ್; ನಿಮ್ಮ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಸಿಎಂಗೆ ಕೇಂದ್ರ ಸಚಿವ… ಇದು 60 ಪರ್ಸೆಂಟ್‌ ಕಮಿಷನ್‌ ಸರ್ಕಾರ, ಗುತ್ತಿಗೆದಾರರಿಗೆ ನೀಡಲು ಹಣವಿಲ್ಲ: ಪ್ರತಿಪಕ್ಷ ನಾಯಕ… ಹಣ ಕೈಯಲ್ಲಿದ್ದರೂ ಸ್ಕಾಲರ್ ಶಿಪ್ ವಿತರಣೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳ ಚಳಿ ಬಿಡಿಸಿದ ಸಿಎಂ… ಅರಣ್ಯ ಒತ್ತುವರಿ, ಕಳ್ಳಬೇಟೆ ತಡೆಗೆ ಗರುಡಾಕ್ಷಿ ಅಸ್ತ್ರ: ಆನ್ಲೈನ್ ಎಫ್ಐಆರ್ ವ್ಯವಸ್ಥೆಗೆ ಚಾಲನೆ ರಾಜ್ಯದಲ್ಲಿ ಎಚ್ ಎಂಪಿವಿ ಸೋಂಕು: ಜನರಲ್ಲಿ ಆತಂಕ ಬೇಡ, ಎಚ್ಚರ ಇರಲಿ; ಆರೋಗ್ಯ… ತೀರ್ಥಹಳ್ಳಿಯ ಕಿತ್ತನಗದ್ದೆ ನಾಡ್ತಿಯ ಹೊಳೆಯಲ್ಲಿ ಮರಳು ಮಾಫಿಯ ಜಾಲ ಪತ್ತೆ ಎಲ್ಲ ಎಸ್ಕಾಂ ಸಿಬ್ಬಂದಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ: ಇಂಧನ ಸಚಿವ… ಊಟದಲ್ಲಿ ರಾಜಕೀಯ ಬೆರೆಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್ ಮೂಡಿಗೆರೆ: ಹುಲಿ ದಾಳಿಗೆ ಬಾಣಂತಿ ಹಸು ಬಲಿ; ಕರುವಿನ ಆಕ್ರಂಧನ

ಇತ್ತೀಚಿನ ಸುದ್ದಿ

ಸುರತ್ಕಲ್ ತಾತ್ಕಾಲಿಕ ಟೋಲ್ ಕೇಂದ್ರ ತೆರವಿಗೆ ಹೋರಾಟ ತೀವ್ರಗೊಳಿಸಲು ನಿರ್ಧಾರ:  ಮಾರ್ಚ್ 1ರಂದು ಸಭೆ

25/02/2022, 09:08

ಮಂಗಳೂರು(reporterkarnataka.com): ಕಳೆದ ಆರು ವರ್ಷಗಳಿಂದ ತಾತ್ಕಾಲಿಕ ನೆಲೆಯಲ್ಲಿ ಕಾರ್ಯಾಚರಿಸುತ್ತಿರುವ ಸುರತ್ಕಲ್  ಟೋಲ್ ಕೇಂದ್ರವನ್ನು ಜನತೆಗೆ ನೀಡಿದ ಭರವಸೆ, ನಿರ್ಣಯಗಳ ಹೊರತಾಗಿಯು ಸಕ್ರಮಗೊಳಿಸಿ ಬಲಪ್ರಯೋಗದ ಮೂಲಕ ಮುಂದುವರಿಸುವ ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಸರ್ವಾಧಿಕಾರಿ ಧೋರಣೆಯನ್ನು ಸುರತ್ಕಲ್ ನಲ್ಲಿ ಸೇರಿದ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ತೀವ್ರವಾಗಿ ಖಂಡಿಸಿತು. ಸುರತ್ಕಲ್ ಟೋಲ್ ಗೇಟ್ ತೆರವಿಗಾಗಿ ಕಳೆದ ಐದಾರು ವರ್ಷಗಳಿಂದ ನಡೆಯುತ್ತಿರುವ ಹೋರಾಟವನ್ನು ಹಂತ ಹಂತವಾಗಿ ತೀವ್ರಗೊಳಿಸಲು ನಿರ್ಧರಿಸಿತು‌. 

ಮಾರ್ಚ್ 1ರಂದು ಮೂಲ್ಕಿಯಲ್ಲಿ ಅವಳಿ ಜಿಲ್ಲೆಗಳ ಸಮಾನ ಮನಸ್ಕ ಸಂಘಟನೆಗಳ ಮುಖಂಡರ ಸಭೆ ನಡೆಸಲು, ಆ ಸಭೆಯಲ್ಲಿ ಮುಂದಿನ ಹೋರಾಟದ ಕುರಿತು ಸಾಮೂಹಿಕ ತೀರ್ಮಾನ ಕೈಗೊಳ್ಳಲು ನಿರ್ಧರಿಸಿತು.

ಹೋರಾಟ ಸಮಿತಿಯ ಪದಾಧಿಕಾರಿಗಳ ಸಭೆಯು ಲಾರಿ ಮಾಲಕರ ಸಂಘದ ಹಿರಿಯ ಮುಂದಾಳು, ಹೋರಾಟ ಸಮಿತಿಯ ಸಹ ಸಂಚಾಲಕರಲ್ಲಿ ಓರ್ವರಾದ ಮೂಸಬ್ಬ ಪಕ್ಷಿಕೆರೆಯವರ ಅಧ್ಯಕ್ಷತೆಯಲ್ಲಿ ನಡೆದು ಇತ್ತೀಚಿನ ಬೆಳವಣಿಗೆಗಳ ಕುರಿತು ಕೂಲಂಕುಷವಾಗಿ ಚರ್ಚಿಸಿತು. ಹಿರಿಯ ವಕೀಲರಾದ ದಿನೇಶ್ ಹೆಗ್ಡೆ ಉಳೇಪಾಡಿ ವಿಲೀನದ ನಿರ್ಣಯದ ಹೊರತಾಗಿಯೂ ತಾತ್ಕಾಲಿಕ ಟೋಲ್ ಕೇಂದ್ರವನ್ನು ಪೂರ್ಣ ಪ್ರಮಾಣದ ಟೋಲ್ ಕೇಂದ್ರವಾಗಿ ಅಧಿಕೃತಗೊಳಿಸುವ ಹೆದ್ದಾರಿ ಪ್ರಾಧಿಕಾರದ ಅಕ್ರಮ ನಡೆಯ ಕುರಿತು ಕಾನೂನು ಹೋರಾಟದ ಅವಕಾಶಗಳ ವಿವರ ನೀಡಿದರು. ಒಟ್ಟು ಬೆಳವಣಿಗಳ ಹಿನ್ನಲೆಯಲ್ಲಿ ಅಭಿಪ್ರಾಯಗಳನ್ನು ಕ್ರೋಢೀಕರಿಸಿ ಅಂತಿಮವಾಗಿ ಕಾನೂನು ಹೋರಾಟಕ್ಕೆ ಬೇಕಾದ ದಾಖಲೆ, ಸಂಪನ್ಮೂಲಗಳನ್ನು ಕ್ರೋಢೀಕರಿಸಲು ವಕೀಲರುಗಳನ್ನು ಒಳಗೊಂಡ ಪ್ರತ್ಯೇಕ ತಂಡ ರಚಿಸುವುದು, ಅದೇ ಸಂದರ್ಭ ಹೆದ್ದಾರಿ ಪ್ರಾಧಿಕಾರದ ಸರ್ವಾಧಿಕಾರಿ ಧೋರಣೆ ಹಿಮ್ಮೆಟ್ಟಿಸಲು, ಜನಪ್ರತಿನಿಧಿಗಳ ಮೇಲೆ ಒತ್ತಡ ಹೇರಲು ದೊಡ್ಡ ಪ್ರಮಾಣದಲ್ಲಿ ಸಾರ್ವಜನಿಕ ಜನಾಭಿಪ್ರಾಯವನ್ನು ರೂಪಿಸುವುದು ಅತ್ಯಗತ್ಯವಾಗಿದ್ದು, ಅದಕ್ಕಾಗಿ ಪಾದಯಾತ್ರೆ, ಪ್ರತಿಭಟನೆ, ಜನಾಗ್ರಹ ಸಭೆಗಳು ಮುಂತಾದ ಹಲವು ಹಂತಗಳ ನಿರ್ಣಾಯಕ ಹೋರಾಟವನ್ನು ಅವಳಿ ಜಿಲ್ಲೆಗಳ  ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆಸಲು ನಿರ್ಧರಿಸಿತು. ಅದರಂತೆ ಮಾರ್ಚ್ ಒಂದು ಮಂಗಳವಾರ ಸಂಜೆ 4 :00 ಗಂಟೆಗೆ ಮೂಲ್ಕಿಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಸಮಾನ ಮನಸ್ಕ ಸಂಘ ಸಂಸ್ಥೆಗಳ ಸಭೆಯನ್ನು ಆಯೋಜಿಸಲಾಗಿದೆ. ಆಸಕ್ತ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಈ ಸಭೆಯಲ್ಲಿ ಭಾಗವಹಿಸಲು ಸಮಿತಿಯು ಮನವಿ ಮಾಡಿದೆ. 

ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ, ಜಯ ಕರ್ನಾಟಕ ಸಂಘಟನೆಯ ಪ್ರಮುಖರು, ಉದ್ಯಮಿ ವೈ ರಾಘವೇಂದ್ರ ರಾವ್, ಮಾಜಿ ಉಪ ಮೇಯರ್ ಪುರುಷೋತ್ತಮ ಚಿತ್ರಾಪುರ, ಯುವ ಉದ್ಯಮಿ ದಿಲ್ ರಾಜ್ ಆಳ್ವ, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ರಘು ಎಕ್ಕಾರು, ಟ್ಯಾಕ್ಸಿ ಮೆನ್ ಮ್ಯಾಕ್ಸಿ ಕ್ಯಾಬ್ ಅಸೋಷಿಯೇಷನ್ ಇದರ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಅಧ್ಯಕ್ಷ ದಿನೇಶ್ ಕುಂಪಲ,  ಟೋಲ್ ವಿರೋಧಿ ಸಮಿತಿ ಹೆಜಮಾಡಿ ಇದರ ಮುಖಂಡ ಶೇಖರ ಹೆಜಮಾಡಿ, ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಬಿ ಕೆ ಇಮ್ತಿಯಾಜ್, ಶ್ರೀನಾಥ್ ಕುಲಾಲ್, ನಾಗರಿಕ ಸಮಿತಿ ಕುಳಾಯಿ ಇದರ ಕಾರ್ಯದರ್ಶಿ ಗಂಗಾಧರ ಬಂಜನ್,  ಉದ್ಯಮಿಗಳೂ, ಸಮಾಜ ಸೇವಕರುಗಳೂ ಆದ ರಾಜೇಶ್ ಶೆಟ್ಟಿ ಪಡ್ರೆ, ಟಿ ಎನ್ ರಮೇಶ್, ಸಾಮಾಜಿಕ ಕಾರ್ಯಕರ್ತರಾದ ಹರೀಶ್ ಪೇಜಾವರ, ರಾಜೇಶ್ ಪೂಜಾರಿ ಕುಳಾಯಿ, ರಶೀದ್ ಮುಕ್ಕ ಮತ್ತಿತರರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು