1:47 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕೊನೆಗೂ ಕೂಡಿ ಬಂದ ಮುಹೂರ್ತ: ಮಸ್ಕಿ  ಹಾಗೂ ಬಸವಕಲ್ಯಾಣ ನೂತನ ಶಾಸಕರ ಪ್ರಮಾಣ ವಚನಕ್ಕೆ ದಿನ ಫಿಕ್ಸ್ 

07/06/2021, 17:07

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಂಗ 

info.reporterkarnataka@gmail.com

ಕೊರೊನಾ ವೇಳೆ ನಡೆದ ವಿಧಾನಸಭೆ  ಉಪ ಚುನಾವಣೆಯಲ್ಲಿ ಜಯದ ಹಾರ ಕೊರಳಿಗೇರಿಸಿಕೊಂಡ ಮಸ್ಕಿ ಕ್ಷೇತ್ರದ ಕಾಂಗ್ರೆಸ್ ನ

ನೂತನ ಶಾಸಕ ಬಸವನಗೌಡ ತುರುವಿಹಾಳ ಹಾಗೂ ಬಸವಕಲ್ಯಾಣದ ಬಿಜೆಪಿ ಶಾಸಕ ಶರಣು ಸಲಗರ್ ಅವರಿಗೆ ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಕೊನೆಗೂ ಕೂಡಿ ಬಂದಿದೆ. ಜೂನ್ 8ರಂದು ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 

ಕೊರೊನಾ ಲಾಕ್ ಡೌನ್ ಇರುವುದರಿಂದ ಮಸ್ಕಿ ಹಾಗೂ ಬಸವಕಲ್ಯಾಣದ ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರವನ್ನು ಮುಂದೂಡಲಾಗಿತ್ತು. ಇದೀಗ ಮಸ್ಕಿ ಕ್ಷೇತ್ರದ ನೂತನ ಶಾಸಕ ಬಸನಗೌಡ ತುರುವಿಹಾಳ ಹಾಗೂ ಬಸವಕಲ್ಯಾಣ ನೂತನ ಶಾಸಕ ಶರಣು ಸಲಗರ್ ಅವರ ಪ್ರಮಾಣ ವಚನದ ದಿನಾಂಕವನ್ನು ವಿಧಾನಸಭೆ ಸ್ಪೀಕರ್ ನಿಗದಿಪಡಿಸಿದ್ದಾರೆ.

ಜೂನ್ 8ರಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಮೂರನೇ ಮಹಡಿ ಸಭಾಂಗಣದಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು