2:42 PM Friday18 - April 2025
ಬ್ರೇಕಿಂಗ್ ನ್ಯೂಸ್
Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ

ಇತ್ತೀಚಿನ ಸುದ್ದಿ

ಎಕ್ಕೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಸಿ ನೆಡುವ ಕಾರ್ಯಕ್ರಮ: ಕಾರ್ಪೊರೇಟರ್ ಪ್ರವೀಣಚಂದ್ರ ಆಳ್ವ ಚಾಲನೆ

07/06/2021, 20:31

ಮಂಗಳೂರು(reporterkarnataka news):ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಪರಿಸರ ದಿನಾಚರಣೆಯ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಎಕ್ಕೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರಗಿತು. 


ಕಂಕನಾಡಿ ಬಿ ವಾರ್ಡ್  ಕಾರ್ಪೊರೇಟರ್ ಪ್ರವೀಣಚಂದ್ರ ಆಳ್ವ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಅವರು ಮಾತನಾಡಿ, ಪರಿಸರ ಪ್ರೇಮ ನಮ್ಮ ಜವಾಬ್ದಾರಿ. ಇದನ್ನು ಉಳಿಸುವ ಕಾರ್ಯ ನಿರಂತರ ಆಗಬೇಕಿದೆ. ಇದನ್ನು ಒಂದು ದಿನಕ್ಕೆ ಸೀಮಿತಗೊಳಿಸದೆ ಪ್ರತಿ ನಿತ್ಯವು  ಇದನ್ನು ಆಚರಿಸಬೇಕೆಂದರು.
ಗಿಡವನ್ನು ಬೆಳೆಸುವುದು ಮಾತ್ರವಲ್ಲ ಅದನ್ನು ಉಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. 



ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ರೆಹನಾ ಮಾತನಾಡಿ,  ವಾತಾವರಣದಲ್ಲಿ ಇಂಗಾಲದ ಡೈ ಆಕ್ಸೈಡ್ ಕಡಿಮೆ ಮಾಡಿ ಆಮ್ಲಜನಕ ಹೆಚ್ಚಿಸುವ ಸಸಿಗಳು ನಮಗೆ ಅನಿವಾರ್ಯವಾಗಿದೆ ಎಂದು ಹೇಳಿದರು. 


ಕಾರ್ಯಕ್ರಮದ ಆಯೋಜಕರಾದ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ ಮಾತನಾಡಿ, ಪ್ರಕೃತಿ ನಮ್ಮ ಉಸಿರು ಪರಿಸರ ಮತ್ತು ಆರೋಗ್ಯಕರ ಬೆಳವಣಿಗೆಗೆ ಮನುಕುಲದ ಉಳಿವಿಗಾಗಿ ನಮ್ಮ ನಿರಂತರ ಪ್ರಯತ್ನ ಆಗಬೇಕಾಗಿದೆ ಎಂದರು. 



 ಈ ಸಂದರ್ಭದಲ್ಲಿ ಪ್ರಾಥಮಿಕ ಕೇಂದ್ರದ ಸುತ್ತಮುತ್ತ ನೆರೆ ಮನೆಯವರಿಂದ  ಗಿಡ ನೆಡಿಸಲಾಯಿತು. ಕೊರೊನಾ ವಾರಿಯರ್ಸ್ ಗಳನ್ನು  ಗೌರವಿಸಲಾಯಿತು. ಕೋವಿಡ್ ನೋಡಲ್ ಅಧಿಕಾರಿ ಡಾ.ಸೇಸಪ್ಪ ಕಾರ್ಯಕ್ರಮ ನಿರೂಪಿಸಿದರು. ಪ್ರಾಥಮಿಕ ಕೇಂದ್ರದ ಸಿಬ್ಬಂದಿ ವರ್ಗ ಹಾಗೂ ಪಾಲಿಕೆಯ ಮಲೇರಿಯ ತಪಾಸಣಾ ಸಿಬ್ಬಂದಿಗಳು  ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು