1:01 AM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಉಕ್ರೇನ್‍: ಕೊಡಗಿನ 10ಕ್ಕೂ ಅಧಿಕ ವಿದ್ಯಾರ್ಥಿಗಳು ಸಂಕಷ್ಟದಲ್ಲಿ; ಮೆಟ್ರೋದ ನೆಲ ಮಾಳಿಗೆಯಲ್ಲಿ ಬದುಕು!

27/02/2022, 09:14

ಮಡಿಕೇರಿ(reporterkarnataka.com): ಯುದ್ಧಗ್ರಸ್ತ ಉಕ್ರೇನ್‍ನಲ್ಲಿ, ಶಿಕ್ಷಣಕ್ಕಾಗಿ ತೆರಳಿರುವ ಕೊಡಗು ಜಿಲ್ಲೆಯ 10ಕ್ಕೂ ಅಧಿಕ ವಿದ್ಯಾರ್ಥಿಗಳು ಸ್ವದೇಶಕ್ಕೆ ಮರಳಲಾಗದೆ ಸಂಕಷ್ಟಕ್ಕೆ ಸಿಲುಕಿದ್ದು, ವಾಪಸ್ ಕರೆದು ತರುವ ಕುರಿತು ಕೇಂದ್ರ ಸರಕಾರ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.

ಯುದ್ಧ ಆರಂಭವಾಗಿರುವುದರಿಂದ ವಿದ್ಯಾರ್ಥಿಗಳ ಪೋಷಕರು ತೀವ್ರ ಆತಂಕಕ್ಕೆ ಒಳಗಾಗಿದ್ದು, ಮಕ್ಕಳನ್ನು ಸುರಕ್ಷಿತವಾಗಿ ಕರೆಸಿಕೊಳ್ಳುವ ನಿಟ್ಟಿನಲ್ಲಿ ಭಾರತ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಕುಶಾಲನಗರ ಸಮೀಪದ ಕೂಡ್ಲೂರು ಗ್ರಾಮದ ನಿವಾಸಿ, ಕೊಡಗು ಜಿಲ್ಲಾ ಕಾಂಗ್ರೆಸ್‍ನ ಮಾಜಿ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಅವರ ಪುತ್ರ ಚಂದನ್ ಗೌಡ, ಮುಳ್ಳುಸೋಗೆ ಗ್ರಾಮದ ಲಿಖಿತ್, ಕೂಡಿಗೆಯ ಅಕ್ಷತಾ, ಆರ್ಜಿ ಗ್ರಾಮದ ಶಾರುಖ್, ಗೋಣಿಕೊಪ್ಪ, ಪೊನ್ನಂಪೇಟೆ, ಶನಿವಾರಸಂತೆ, ಅಮ್ಮತ್ತಿ ಮುಂತಾದೆಡೆಯ ಬಿ.ವಿ.ಅಶ್ವಿನ್ ಕುಮಾರ್, ಅಲಿಶಾ ಸೈಯದ್ ಅಲಿ, ಅಕ್ಷಿತಾ ಅಕ್ಕಮ್ಮ, ಎಂ.ಪಿ.ನಿರ್ಮಲಾ, ಅರ್ಜುನ್ ವಸಂತ್, ಸಿನಿಯಾ ವಿ.ಜೆ, ತೇಜಸ್ವಿನಿ ಕಾಂತರಾಜ್, ಶೀತಲ್ ಸಂಪತ್ ಮುಂತಾದವರು ಉಕ್ರೇನ್’ನಲ್ಲಿ ಸಿಲುಕಿಕೊಂಡಿರುವುದಾಗಿ ಜಿಲ್ಲಾಡಳಿತಕ್ಕೆ ಮಾಹಿತಿ ಲಭಿಸಿದೆ. ಹೆಚ್ಚಿನವರು ವೈದ್ಯಕೀಯ ವಿದ್ಯಾರ್ಥಿಗಳು ಎಂಬುದೇ ವಿಶೇಷ.

ಉಕ್ರೇನ್‍ನ ಮೇಲೆ ರಷ್ಯಾ ದಾಳಿ ನಡೆಸುತ್ತಿರುವ ಹಿನ್ನೆಲೆ, ತೀವ್ರ ಆತಂಕದ ಸ್ಥಿತಿ ನಿರ್ಮಾಣವಾಗಿದೆ. ಮೂರನೇ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿರುವ ಚಂದನ್ ಗೌಡ ಅವರನ್ನು ದೂರವಾಣಿಯ ಮೂಲಕ ತಂದೆ ಕೆ.ಕೆ.ಮಂಜುನಾಥ್ ಕುಮಾರ್ ಸಂಪರ್ಕಿಸಿ, ಯೋಗ ಕ್ಷೇಮ ವಿಚಾರಿಸಿದ್ದಾರೆ.

ವೈದ್ಯಕೀಯ ಶಿಕ್ಷಣಕ್ಕಾಗಿ ಉಕ್ರೇನ್‍ನಲ್ಲಿರುವ ಚಂದನ್ ಗೌಡ, ರಷ್ಯಾ ದಾಳಿಯ ಹಿನ್ನೆಲೆಯಲ್ಲಿ ಅಲ್ಲಿನ ಸರ್ಕಾರದ ಸೂಚನೆಯಂತೆ ಇತರರೊಂದಿಗೆ ಮೆಟ್ರೋ ನೆಲ ಮಾಳಿಗೆಯಲ್ಲಿ ಆಶ್ರಯ ಪಡೆದಿದ್ದಾರೆ. ನೀರು, ಆಹಾರಕ್ಕೆ ಯಾವುದೇ ಸಮಸ್ಯೆ ಇಲ್ಲಿಯವರೆಗೆ ಎದುರಾಗಿಲ್ಲವೆಂದು ಪುತ್ರ ತಿಳಿಸಿರುವುದಾಗಿ ಮಂಜುನಾಥ್ ಕುಮಾರ್ ಹೇಳಿದ್ದಾರೆ. ದೂರ ದೇಶದಲ್ಲಿ ಆತಂಕದ ನಡುವೆ ಪುತ್ರ ಸಿಲುಕಿರುವ ಬಗ್ಗೆ ಅತೀವ ಆತಂಕ ವ್ಯಕ್ತಪಡಿಸಿ ಅವರು ಗದ್ಗದಿತರಾದರು.

ಉಕ್ರೇನ್‍ನಲ್ಲಿ ಸಿಲುಕಿಕೊಂಡಿರುವ ಮತ್ತೊಬ್ಬ ವಿದ್ಯಾರ್ಥಿ ಶಾರುಖ್ ಮನೆಯಲ್ಲಿ ಪೋಷಕರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಮೆಟ್ರೋದ ನೆಲ ಮಾಳಿಗೆಯಲ್ಲಿ ಭಯ ಆತಂಕಗಳ ನಡುವೆ ಇತರರೊಂದಿಗೆ ರಕ್ಷಣೆ ಪಡೆಯುತ್ತಿದ್ದು, ಆತನನ್ನು ಸಂಪರ್ಕಿಸಿದ ಸಂದರ್ಭ ಮೊಬೈಲ್ ಚಾರ್ಜ್ ಸಹ ಇಲ್ಲದೆ ಆತ ತೊಂದರೆ ಒಳಗಾಗಿದ್ದಾರೆ. ಇದೀಗ ಮೊಬೈಲ್ ನೆಟ್’ವರ್ಕ್ ಸಹ ಇಲ್ಲದೆ ಕಳೆದೊಂದು ದಿನದಿಂದ ಸಂಪರ್ಕ ಸಾಧ್ಯವಾಗದ ಬಗ್ಗೆಯೂ ಕಳವಳ ವ್ಯಕ್ತಪಡಿಸಿದ್ದಾರೆ.

ಉಕ್ರೇನ್‍ನ ಕಾರ್ಕಿವ್ ಪಟ್ಟಣದಿಂದ ವಿಡಿಯೋ ಮೂಲಕ ಮಾತನಾಡಿರುವ ಕೂಡ್ಲೂರಿನ ಚಂದನ್ ಗೌಡ, ಉಕ್ರೇನ್‍ನಲ್ಲಿ ಶಿಕ್ಷಣಕ್ಕಾಗಿ ಬಂದ ಭಾರತೀಯರು ಸುಮಾರು 15 ಸಾವಿರದಷ್ಟು ಇರಬಹುದು. ನಾನಿರುವ ಕಾರ್ಕಿವ್‍ನಲ್ಲಿ 150 ರಿಂದ 200 ಮಂದಿ ಕರ್ನಾಟಕದ ವಿದ್ಯಾರ್ಥಿಗಳು ಇದ್ದೇವೆ. ಯುದ್ಧದ ಹಿನ್ನೆಲೆಯಲ್ಲಿ ನಮ್ಮನ್ನು ಬಾಂಬ್ ಷೆಡ್ಡರ್ಸ್’ಗಳಲ್ಲಿ ಇರುವಂತೆ ಸರ್ಕಾರ ತಿಳಿಸಿದೆ. ಆದರೆ, ಅಗತ್ಯ ಆಹಾರ ವ್ಯವಸ್ಥೆ ಇಲ್ಲ. ನಾವಿರುವ ಮನೆಯಲ್ಲಿ ಎರಡು ಮೂರು ದಿನಗಳಿಗೆ ಆಗುವಷ್ಟು ಮಾತ್ರ ಆಹಾರವಿದೆಯೆಂದು ತಿಳಿಸಿದ್ದಾರೆ.

ಕಾರ್ಕಿವ್ ಪಟ್ಟಣ ಗಡಿ ಭಾಗದಿಂದ ಕೇವಲ 15 ರಿಂದ 20 ಕಿ.ಮೀ. ನಷ್ಟು ದೂರದಲ್ಲಿದ್ದು, ಯಾವ ಕ್ಷಣದಲ್ಲಿ ಗುಂಡಿನ ದಾಳಿ, ಬಾಂಬ್ ದಾಳಿ ನಡೆಯುತ್ತದೋ ಗೊತ್ತಾಗುವುದಿಲ್ಲ. ನಮ್ಮನ್ನು ಇಲ್ಲಿಂದ ಹೊರ ಕರೆದೊಯ್ಯಬೇಕು ಎಂದು ತಿಳಿಸಿದರು.


ನಾವಿರುವ ಸ್ಥಳದಿಂದ ಉಕ್ರೇನ್‍ನ ಪಶ್ಚಿಮ ಭಾಗಕ್ಕೆ 1500 ಕಿ.ಮೀ. ತೆರಳಿ, ಬಳಿಕ ಪೋಲೆಂಡ್ ಮೂಲಕ ಭಾರತಕ್ಕೆ ಕರೆದೊಯ್ಯಬೇಕು. ಆದರೆ, ಪ್ರಸ್ತುತ ಯಾವುದೇ ವಾಹನ ವ್ಯವಸ್ಥೆಗಳು ಇಲ್ಲಿ ಇಲ್ಲವೆಂದು ಅಳಲು ತೋಡಿಕೊಂಡಿದ್ದು, ಸ್ವದೇಶಕ್ಕೆ ನಮ್ಮನ್ನು ಕರೆಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಭಾರತ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು