7:20 PM Friday12 - December 2025
ಬ್ರೇಕಿಂಗ್ ನ್ಯೂಸ್
ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ ರಾಜ್ಯದಲ್ಲಿ 37,48,700 ವಸತಿ ರಹಿತರು: ವಿಧಾನ ಪರಿಷತ್ ನಲ್ಲಿ ಸಚಿವ ಜಮೀರ್ ಖಾನ್ ಬೆಂಗಳೂರು ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಧರ್ಮ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರ ಉದ್ಘಾಟನೆ

ಇತ್ತೀಚಿನ ಸುದ್ದಿ

ಎಟಿಎಂ ಕಳವು ಯತ್ನ: ಜನರಿಂದ ತಪ್ಪಿಸಿಕೊಂಡು ಓಡಲೆತ್ನಿಸಿದ ಕಳ್ಳರು ಮಾಡಿದ್ದೇನು? ಪೊಲೀಸರಿಗೆ ಸಿಕ್ಕಿ ಬಿದ್ದದ್ದು ಹೇಗೆ?

28/02/2022, 15:34

ದೊಡ್ಡಬಳ್ಳಾಪುರ(reporterkarnataka.com): ಇನ್ನೇನು ಎಟಿಎಂ ಯಂತ್ರ ಒಡೆದು ಹಣ ಎಗರಿಸಬೇಕೆನ್ನುವಷ್ಟರಲ್ಲಿ ಸಾರ್ವಜನಿಕರ ಕಣ್ಣಿಗೆ ಬಿದ್ದ ಕಳ್ಳರಿಬ್ಬರು ತಕ್ಷಣ ಕಾಲಿಗೆ ಬುದ್ಧಿ ಹೇಳುತ್ತಾರೆ. ಆದರೂ ಜನ ಬೆನ್ನಟ್ಟುತ್ತಾರೆ. ಅವರಿಂದ ತಪ್ಪಿಸಿಕೊಳ್ಳಲು ಅದೇ ರಸ್ತೆಯಲ್ಲಿ ಬರುತ್ತಿದ್ದ ಕಾರೊಂದಕ್ಕೆ ಕೈಅಡ್ಡಹಾಕಿದ ಕಳ್ಳರು ಡ್ರಾಪ್ ಕೇಳಿದ್ರು.

ಕಾರು ನಿಲ್ಲುತ್ತಿದ್ದಂತೆ ಅದರೊಳಗೆ ಹತ್ತಿ ಅಬ್ಬಾ ಬಚಾವಾದೆವು ಎಂದು ನಿಟ್ಟುಸಿರು ಬಿಡುತ್ತಿದ್ದಂತೆ ಆ ಕಾರು ನೇರವಾಗಿ ಪೊಲೀಸ್​ ಠಾಣೆ ಮುಂದೆ ನಿಲ್ಲುತ್ತೆ. ಅರೇ ಇದ್ಹೇನಿದು..? ಎಂದು ಕಳ್ಳರು ಪಿಳಿಪಿಳಿ ಕಣ್ಣುಬಿಟ್ಟು ನೋಡುವಷ್ಟರಲ್ಲಿ ಗೊತ್ತಾಗುತ್ತೇ ತಾವು ಡ್ರಾಪ್​ ಕೇಳಿದ್ದು ಪೊಲೀಸರನ್ನೇ..!

ಇದು ಯಾವ ಸಿನಿಮಾ ಕಥೆಯೂ ಅಲ್ಲ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಮೇಳೆಕೋಟೆಯೊಂದರ ಎಟಿಎಂ ಕೇಂದ್ರದಲ್ಲಿ ಶನಿವಾರ ದರೋಡೆ ಪ್ರಯತ್ನ ನಡೆಸಿದ ಕಳ್ಳರಿಬ್ಬರ ರಿಯಲ್ ಕಥೆ.

ಪ್ರಕರಣ ಸಂಬಂಧ ನೆಲಮಂಗಲ ತಾಲೂಕು ಅರಿಶಿನಕುಂಟೆ ನಿವಾಸಿಗಳಾದ ಸಚಿನ್ ಹಾಗೂ ಗಗನ್ ಎಂಬುವರನ್ನು ಬಂಧಿಸಿರುವ ದೊಡ್ಡಬಳ್ಳಾಪುರ ಠಾಣೆ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮೇಳೆಕೋಟೆ ಎಂಟಿಬಿ ಕೇಂದ್ರ ದರೋಡೆಗೆ ಯತ್ನಿಸಿದ ಕಳ್ಳರಿಬ್ಬರು ಜನರಿಂದ ತಪ್ಪಿಸಿಕೊಂಡು ಪರಾರಿಯಾಗುತ್ತಿದ್ದರು. ಇದೇ ವೇಳೆ ಮಾಹಿತಿ ಪಡೆದ ಪೊಲೀಸರು ಖಾಸಗಿ ಕಾರಿನಲ್ಲಿ ಅದೇ ಮಾರ್ಗದಲ್ಲಿ ಬರುತ್ತಿದ್ದರು. ಈ ಬಗ್ಗೆ ಅರಿವೇ ಇಲ್ಲದ ಕಳ್ಳರು ಜನರಿಂದ ತಪ್ಪಿಸಿಕೊಳ್ಳಲು ಪೊಲೀಸರಿದ್ದ ಕಾರಿಗೆ ಕೈ ಅಡ್ಡಹಾಕಿ ಡ್ರಾಪ್​ ಕೇಳಿದ್ದರು. ಕಳ್ಳರನ್ನು ಹಿಡಿಯಲು ಬಂದ ಪೊಲೀಸರಿಗೆ ತುಪ್ಪ ಜಾರಿ ರೊಟ್ಟಿಗೆ ಬಿದ್ದಂತಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು