10:30 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ಕಠಿಣ ಪರಿಶ್ರಮ ಮತ್ತು ಆತ್ಮ ವಿಶ್ವಾಸದಿಂದ ಸಿಎ ಪದವಿಯನ್ನು ಪಡೆದ ಕೆನರಾ ಸಂಧ್ಯಾ ಕಾಲೇಜು ವಿದ್ಯಾರ್ಥಿಗಳಿಗೆ ಸನ್ಮಾನ

28/02/2022, 22:10

ಮಂಗಳೂರು(reporterkarnataka.com); ಡಿಸೆಂಬರ್ 2021ನೇ ವರ್ಷದಲ್ಲಿ ನಡೆದ ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾದ ಕೆನರಾ ಸಂಧ್ಯಾ ಕಾಲೇಜಿನ ಹಳೆಯ ವಿದ್ಯಾರ್ಥಿಗಳಾದ ಗೋಕುಲ್ ಪೈ, ಪೂರ್ಣಿಮಾ ರಾವ್ ಹಾಗೂ ಸಂಜನಾ ಪೈ ಅವರಿಗೆ  ಸನ್ಮಾನ ಮಾಡಲಾಯಿತು.

“ನಾವು ನಿಷ್ಠಾವಂತರು ಮತ್ತು ಶ್ರಮದಾಯಕರಾಗಿದ್ದರೆ  ಏನನ್ನೂ ಸಾಧಿಸಬಹುದು. ನಮ್ಮಲ್ಲಿ ಆತ್ಮವಿಶ್ವಾಸ , ದೇವರಲ್ಲಿ ನಂಬಿಕೆ ಮತ್ತು ಭಕ್ತಿ ಇದ್ದರೆ ಯಾವ ಎತ್ತರಕ್ಕಾದರೂ ನಾವು ತಲುಪಬಹುದು. ಮೊದಲಾಗಿ ನಮ್ಮ ಜೀವನದಲ್ಲಿ ಶಿಸ್ತನ್ನು ಅಳವಡಿಸಬೇಕು ಮತ್ತು ನಾವು ಮಾಡುವ ಕಾರ್ಯದಲ್ಲಿ ನಂಬಿಕೆ ಇರುವುದು ಮುಖ್ಯ” ಎಂದು ಕಾಲೇಜಿನ ಸಂಚಾಲಕ  ಸಿಎ ಜಗನ್ನಾಥ ಕಾಮತ್ ನುಡಿದರು.


ಸನ್ಮಾನ ಸ್ವೀಕರಿಸಿದ ವಿದ್ಯಾರ್ಥಿಗಳು ತಮ್ಮ ಯಶಸ್ಸಿನ ಗುಟ್ಟನ್ನು ಎಲ್ಲಾ ವಿದ್ಯಾರ್ಥಿಗಳ ಜೊತೆ ಹಂಚಿಕೊಂಡರು.

ಕಾಲೇಜಿನ ವಿದ್ಯಾರ್ಥಿನಿ ಸಹನಾ ಪ್ರಾರ್ಥನೆಗೈದರು, ಕಾಲೇಜಿನ ಪ್ರಾಂಶುಪಾಲರಾದ  ಪ್ರೊ. ಅನಿಲಾ ಕಾಮತ್ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಕಾವ್ಯಶ್ರೀ ವಂದಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಸ್ಮಿತಾ ಎಂ. ಕಾರ್ಯಕ್ರಮವನ್ನು ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು