ಇತ್ತೀಚಿನ ಸುದ್ದಿ
Good News: SSLC ಮತ್ತು ITI ಪಾಸಾದವರಿಗೆ ಬಿಎಂಟಿಸಿಯಲ್ಲಿ ಇದೆ ಉದ್ಯೋಗ
04/03/2022, 10:50
ಬೆಂಗಳೂರು(reporterkarnataka.com): ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ( ಬಿಎಂಟಿಸಿ) ಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳನ್ನು ಈ ಕೆಳಗೆ ನೀಡಲಾಗಿದೆ.
ಹುದ್ದೆಯ ವಿವರ : -300 ಅಪ್ರೆಂಟಿಸ್ ಹುದ್ದೆ.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : ಫೆ.25, 2022.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 30, 2022.
ಪೂರ್ಣಾವಧಿಯಲ್ಲಿ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ.
ವಿದ್ಯಾರ್ಹತೆ :- ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ ಸಂಸ್ಥೆಯಿಂದ ಎಸ್ ಎಸ್ ಎಲ್ ಸಿ ಅಥವಾ ಐಟಿಐ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಯೋಮಿತಿ : – ಅಪ್ರೆಂಟಿಸ್ ಹುದ್ದೆಗಳಿಗೆ ಮಾರ್ಚ್ 30, 2022 ರ ಅನ್ವಯ ಕನಿಷ್ಠ 16 ರಿಂದ ಗರಿಷ್ಠ 26 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಎಸ್ ಎಸ್ ಎಲ್ ಸಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳಿಗೆ 6000/- ಮತ್ತು ಐಟಿಐ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳಿಗೆ 7000/- ರೂ.ತರಬೇತಿ ಭತ್ಯೆ ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:- ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ನಂತರ ಅರ್ಜಿಯ ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಮಾರ್ಚ್ 30, 2022 ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಕಚೇರಿ ವಿಳಾಸ :- ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ತರಬೇತಿ ಕೇಂದ್ರ, 2 ನೇ ಮಹಡಿ, ಶಾಂತಿನಗರ ಬಸ್ ನಿಲ್ದಾಣ, ಬೆಂಗಳೂರು – 560027.