7:37 AM Monday6 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ‘ಒತ್ತಡ ನಿರ್ವಹಣೆ’ ಕುರಿತು ಆನ್ ಲೈನ್ ಜಾಗೃತಿ ಕಾರ್ಯಕ್ರಮ

07/06/2021, 21:20

ಬಂಟ್ವಾಳ(reporterkarnataka news): ಮೊಡಂಕಾಪು ಕಾರ್ಮೆಲ್ ಕಾಲೇಜ್ ಆಶ್ರಯದಲ್ಲಿ ಎನ್ನೆಸ್ಸೆಸ್ ಸ್ವಯಂಸೇವಕರಿಗೆ ಒತ್ತಡ ನಿರ್ವಹಣೆ ಎಂಬ ವಿಷಯದ ಬಗ್ಗೆ ಆನ್ ಲೈನ್ ಶೈಕ್ಷಣಿಕ ಕಾರ್ಯಕ್ರಮ ಆಯೋಜಿಸಲಾತು. 

ದಕ್ಷಿಣ ಕನ್ನಡ ಯುವ ಸಬಲೀಕರಣ ಮತ್ತು ಕ್ರೀಡಾ ವಿಭಾಗದ ಜಿಲ್ಲಾ ಯುವ ಸಲಹೆಗಾರ ಶ್ರೀ ಕಾಂತ್ ಪೂಜಾರಿ ಬಿರಾವ್  ಕಾರ್ಯ ಕ್ರಮದ ಸಂಪನ್ಮೂಲ ವ್ಯಕ್ತಿಯಾಗಿದ್ದರು.

ಒತ್ತಡಗಳನ್ನು ನಾವೇ ಜಯಿಸಲು ವಿವಿಧ ವಿಧಾನ ಮತ್ತು ಅದರ ಬಗ್ಗೆ ಜಾಗೃತಿ ಮೂಡಿಸುವ ಪ್ರಾಮುಖ್ಯತೆಯ ಬಗ್ಗೆ ಅವರು ವಿವರಿಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ.ಸಿಸ್ಟರ್ ಲತಾ ಫೆರ್ನಾಂಡಿಸ್ ಎ.ಸಿ ಅವರು ಮಾತನಾಡಿ, ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ಆದಕ್ಕೆ ಸಂಬಂಧಿಸಿದ ಅನಗತ್ಯ ಒತ್ತಡವನ್ನು ತಪ್ಪಿಸಲು ಸಾಮಾನ್ಯ ಜನರಿಗೆ ಜಾಗೃತಿ ಮೂಡಿಸುವ ಮಹತ್ವವನ್ನು ತಿಳಿಸಿದರು.

ಬಂಟ್ವಾಳ ಲಯನ್ ಕ್ಲಬ್ ನ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಕೂಡ ಉಪಸ್ಥಿತರಿದ್ದರು.
ಕಾರ್ಯಕ್ರಮ ಅಧಿಕಾರಿ ಮಧುರಾ ಕೆ.ಕಾರ್ಯಕ್ರಮ ಆಯೋಜಿಸಿದ್ದರು.
ಸುಮಾರು 100 ಜನ ಈ ಕಾರ್ಯಕ್ರಮದ ಪ್ರಯೋಜನ ವನ್ನು ಪಡೆದರು

ಇತ್ತೀಚಿನ ಸುದ್ದಿ

ಜಾಹೀರಾತು