11:19 PM Friday18 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ರಾಜ್ಯ ಬಜೆಟ್: ಈ ಬಾರಿ ಯಾವುದೇ ತೆರಿಗೆ ಹೆಚ್ಚಳವಿಲ್ಲ; ಯಾವ ಜಿಲ್ಲೆಗಳಿಗೆ ಏನೇನು ಇದೆ?

04/03/2022, 16:35

ಬೆಂಗಳೂರು(reporterkarnataka.com)

ರಾಜ್ಯದ ಜನತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುಡ್ ನ್ಯೂಸ್ ನೀಡಿದ್ದಾರೆ ತೆರಿಗೆ ಹೆಚ್ಚಳದಿಂದ ತತ್ತರಿಸಿರುವ ಜನತೆಗೆ ಈ ಬಾರಿಯ ಬೊಮ್ಮಾಯಿ ಅವರ ಚೊಚ್ಚಲ ಬಜೆಟ್ ನಲ್ಲಿ ಯಾವುದೇ ತೆರಿಗೆ ಹೆಚ್ಚಳ ಪ್ರಸ್ತಾಪ ಮಾಡಿಲ್ಲ.

ವಿಧಾನಸಭೆಯಲ್ಲಿ ಇಂದು ಮಧ್ಯಾಹ್ನ ರಾಜ್ಯದ 2022-23 ಸಾಲಿನ ಬಜೆಟ್  ಮಂಡಿಸಿದರು.

ರಾಜ್ಯದಲ್ಲಿ ಯಾವುದೇ ತೆರಿಗೆ ಹೆಚ್ಚಳ ಇಲ್ಲ, ರಾಜಸ್ವ ಕೊರತೆ ಅಂದಾಜು 14,699 ಕೋಟಿ, ವಿತ್ತೀಯ ಕೊರತೆ ಅಂದಾಜು 61,564 ಕೋಟಿ ಇದೆ ಎಂದರು.

ಸಾರಿಗೆ ಇಲಾಖೆಗೆ 8,007 ಕೋಟಿ ರಾಜಸ್ವ ಸಂಗ್ರಹಣೆ ಗುರಿ, ಅಬಕಾರಿ ಇಲಾಖೆಗೆ 29,000 ಕೋಟಿ ರಾಜಸ್ವ ಸಂಗ್ರಹ ಗುರಿ, ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ 15,000 ಕೋಟಿ ರೂ ರಾಜಸ್ವ ಗುರಿ, ವಾಣಿಜ್ಯ ತೆರಿಗೆ ಇಲಾಖೆಗೆ 77,010 ಕೋಟಿ ತೆರಿಗೆ ಸಂಗ್ರಹ ಗುರಿ, 287 ಕೋಟಿ ವೆಚ್ಚದಲ್ಲಿ ರಾಜ್ಯಾದ್ಯಂತ ಕೃಷಿ ಜಮೀನು ಮತ್ತು ಇತರೆ ಸ್ವತ್ತು ಡ್ರೋಣ್ ಸರ್ವೇ ಮಾಡಲಾಗುತ್ತದೆ ಎಂದರು.

406 ಕೋಟಿ ವೆಚ್ಚದಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿ ಉನ್ನತೀಕರಣ, ಎಲ್ಲಾ ಪಾರಂಪರಿಕ ನೊಂದಾಯಿತ ಶಾಶ್ವತ ದಾಖಲೆಗಳ ಸ್ಕ್ಯಾನಿಂಗ್ ಮಾಡಲಾಗುತ್ತದೆ. ಮೊದಲ ಹಂತದಲ್ಲಿ ಬಿಬಿಎಂಪಿ ಮತ್ತು ೧೦ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸ್ಕ್ಯಾನಿಂಗ್ ಗೆ 15 ಕೋಟಿ ಮೀಸಲು ಇಡಲಾಗಿದೆ ಎಂದು ತಿಳಿಸಿದರು.

ರಾಜ್ಯದ ಗ್ರಾಮೀಣ ಜನತೆಗೆ ಸಿಹಿಸುದ್ದಿ : ಗ್ರಾಮೀಣ ಪ್ರದೇಶದಲ್ಲಿ ನೂತನ 100 ಪಶುಚಿಕಿತ್ಸಾಲಯಗಳ ಸ್ಥಾಪನೆ

ಲಗ್ರಾಮೀಣ ಪ್ರದೇಶದಲ್ಲಿ ಜಾನುವಾರುಗಳ ಆರೋಗ್ಯ ರಕ್ಷಣೆಯು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಪಶು ಚಿಕಿತ್ಸಾಲಯಗಳನ್ನು ಬಲಪಡಿಸುವುದರೊಂದಿಗೆ ನೂತನ 100 ಪಶುಚಿಕಿತ್ಸಾಲಯಗಳನ್ನು ಹಂತ ಹಂತವಾಗಿ ಪ್ರಾರಂಭಿಸಲಾಗುವುದು.

ಖಾಲಿಇರುವ 400 ಪಶು ವೈದ್ಯಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತರ ಗೌರವಧನ ಹೆಚ್ಚಳ ಮಾಡಲಾಗಿದೆ. 20 ವರ್ಷಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆಯರಿಗೆ 1,500 ರೂ. 15 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದವರಿಗೆ 1,200 ರೂ. ಹಾಗೂ 15 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ 1,000 ರೂ. ಗೌರವಧನ ಹೆಚ್ಚಳ ಮಾಡಲಾಗಿದೆ.

ಮೀನುಗಾರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಪ್ರಸಕ್ತ ಸಾಲಿನಲ್ಲಿ 5 ಸಾವಿರ ವಸತಿ ರಹಿತ ಮೀನುಗಾರರಿಗೆ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಆದ್ಯತೆ ಮೇರೆಗೆ ಮನೆಗಳನ್ನು ನಿರ್ಮಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಕುರಿಗಾಹಿಗಳಿಗೆ 5 ಲಕ್ಷ ರೂ. ವಿಮಾ ಸೌಲಭ್ಯ, ಆರ್ಥಿಕವಾಗಿ ಹಿಂದುಳಿದ ಕುರಿಗಾಹಿಗಳಿಗೆ ವಸತಿ ನಿರ್ಮಾಣಕ್ಕೆ 5 ಲ್ಕಷ ರೂ. ಸಹಾಯಧನ. ಗಂಗಾ ಕಲ್ಯಾಣ ಯೋಜನೆಗೆ 111 ಕೋಟಿ ರೂ. ಮೀಸಲು, ಶಾಲೆಗಳಲ್ಲಿ ಬಿಸಿಯೂಟ ತಯಾರಕರು ಹಾಗೂ ಸಹಾಯಕಿಯರಿಗೆ ಗೌರವ ಧನ 1 ಸಾವಿರ ರೂ.ಹೆಚ್ಚಳ ಮಾಡಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

30 ಸರ್ಕಾರಿ ಐಟಿಐ ಸರ್ಕಾರಿ ಕಾಲೇಜು ಮೇಲ್ದರ್ಜೆಗೆ ಏರಿಸಲಾಗುವುದು, ಗ್ರಾಮೀಣ ಜನರೆಗೆ ತಾಲೂಕು ಮಟ್ಟದಲ್ಲಿ ಹೃದಯ ಚಿಕಿತ್ಸೆ ನೀಡಲಾಗುವುದು. ರಾಜ್ಯದಲ್ಲಿ 7 ತಾಲೂಕಿನಲ್ಲಿ 100 ಹಾಸಿಗೆಗಳ ಆಸ್ಪತ್ರೆ ಸ್ಥಾಪನೆ, ಆಶಾ ಕಾರ್ಯಕರ್ತೆಯರಿಗೆ ಗೌರವಧನ 1 ಸಾವಿರ ರೂ. ಏರಿಕೆ ಮಾಡಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ರಾಜ್ಯದಲ್ಲಿ ವಿನೂತನ ಮಾದರಿಯ 7 ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗುವುದು, ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ, ಹಾಗೂ ಬಾಗಲಕೋಟೆಯಲ್ಲಿ ಹೊಸ ವಿಶ್ವವಿದ್ಯಾಲಯ ಸ್ಥಾಪಿಸಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು