8:13 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮರೆಯಾದ ಕ್ರಿಕೆಟ್ ದಂತಕಥೆ ; ಹೃದಯಾಘಾತದಿಂದ ಜಗತ್ತಿಗೆ ಗುಡ್ ಬೈ ಹೇಳಿದ ಮ್ಯಾಜಿಕ್ ಸ್ಪಿನ್ನರ್ ಶೇನ್ ವಾರ್ನ್

04/03/2022, 21:16

ಆಸ್ಟ್ರೇಲಿಯಾದ ಲೆಜೆಂಡರಿ ಲೆಗ್ ಸ್ಪಿನ್ನರ್ ಶೇನ್ ವಾರ್ನ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ

ಥೈಲ್ಯಾಂಡ್‌ನಲ್ಲಿದ್ದ ಶೇನ್ ವಾರ್ನ್ ಇದ್ದಕ್ಕಿದ್ದಂತೆ ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಆಸ್ಟ್ರೇಲಿಯನ್ ನ್ಯೂಸ್ ಚಾನೆಲ್ ಫಾಕ್ಸ್ ಸ್ಪೋರ್ಟ್‌ ವರದಿ ಮಾಡಿದೆ.

ವಾರ್ನ್ ಅವರು ಥಾಯ್ಲೆಂಡ್‌ನ ವಿಲ್ಲಾದಲ್ಲಿ ನೆಲೆಸಿದ್ದರು. ಶನಿವಾರ ಬೆಳಿಗ್ಗೆ (ಆಸ್ಟ್ರೇಲಿಯನ್ ಸಮಯ) ಅವರು ತಮ್ಮ ವಿಲ್ಲಾದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ ವೈದ್ಯಕೀಯ ತಂಡದ ಎಲ್ಲಾ ಪ್ರಯತ್ನಗಳ ಹೊರತಾಗಿಯೂ, ಅವರನ್ನು ಬದುಕುಳಿಸಲು ಸಾಧ್ಯವಾಗಲಿಲ್ಲ ಎಂದು ವಾರ್ನ್​ ಅವರ ಆಪ್ತ ವಲಯ ಮಾಹಿತಿ ನೀಡಿದೆ.

ವಾರ್ನ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕ್ರಿಕೆಟ್ ಅಭಿಮಾನಿಗಳು ಹಾಗೂ ಅವರ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಭಾರತದ ಮಾಜಿ ಬ್ಯಾಟ್ಸ್‌ಮನ್ ವೀರೇಂದ್ರ ಸೆಹ್ವಾಗ್ ಟ್ವಿಟರ್‌ನಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ. ವಾರ್ನ್ 15 ವರ್ಷಗಳಿಂದ ಆಸ್ಟ್ರೇಲಿಯಾ ಪರ ಶ್ರೇಷ್ಠ ಬೌಲರ್ ಆಗಿದ್ದು 708 ಟೆಸ್ಟ್ ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಅವರಿಗೆ 52 ವರ್ಷ ವಯ್ಯಸ್ಸಾಗಿತ್ತು.

ಮುತ್ತಯ್ಯ ಮುರಳೀಧರನ್ ನಂತರ ವಿಶ್ವ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಬೌಲರ್ ಎನಿಸಿಕೊಂಡ ಖ್ಯಾತಿ ಶೇನ್ ವಾರ್ನ್​ ಅವರದ್ದು.

ಇತ್ತೀಚಿನ ಸುದ್ದಿ

ಜಾಹೀರಾತು