ಇತ್ತೀಚಿನ ಸುದ್ದಿ
ಕೊರೊನಾ ಹೆಚ್ಚಳ: ರಾಯಚೂರು ಜಿಲ್ಲೆಯಾದ್ಯಂತ ಇಂದಿನಿಂದ ಜೂನ್ 11ರ ವರೆಗೆ ಕಠಿಣ ನಿರ್ಬಂಧ
08/06/2021, 06:45
ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
info.reporterkarnataka@gmail.com
ರಾಯಚೂರು ಜಿಲ್ಲೆಯಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು ನಿಯಂತ್ರಣಕ್ಕೆ ಬಾರದೇ ಇರುವ ಹಿನ್ನೆಲೆಯಲ್ಲಿ ಈ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಅಗತ್ಯ ವಸ್ತು ಹೊರತುಪಡಿಸಿ ನಾಳೆಯಿಂದ(ಜೂನ್ 8) ಜೂನ್ 11ರ ವರೆಗೆ
ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ.
ನೀರು, ಹಾಲು ಮಾರಾಟ, ಆಸ್ಪತ್ರೆಗಳು, ಔಷಧಿ ಅಂಗಡಿಗಳು ಹಾಗೂ ಅಗತ್ಯ ಸೇವೆಗಳಾದ ಅಂಬುಲೆನ್ಸ್, ಅಗ್ನಿ ಶಾಮಕ, ವಿದ್ಯುತ್, ಪೆಟ್ರೋಲ್ ಪಂಪ್, ಮತ್ತು ಇತರೆ ತುರ್ತು ವೈದ್ಯಕೀಯ ಸೇವೆಗಳು ಹಾಗೂ ಕೃಷಿ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ.
ದಿನಾಂಕ 08-06-2021(ಮಂಗಳವಾರ) ಮದ್ಯಾಹ್ನ 02-00 ಗಂಟೆಯಿಂದ 11-06-2021 (ಶುಕ್ರವಾರ) ರಾತ್ರಿ 12.00 ಗಂಟೆವರೆಗೆ ಈ ಸಂಪೂರ್ಣ ನಿರ್ಬಂಧ ಜಾರಿಯಲ್ಲಿರುತ್ತದೆ.
ಬ್ಯಾಂಕ್ ಗಳು ಮತ್ತು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಜಿಲ್ಲಾ ನೋಂದಣಾಧಿಕಾರಿ ಹಾಗೂ ಉಪ ನೋಂದಣಾಧಿಕಾರಿ ಕಚೇರಿಗಳು ಬೆಳಿಗ್ಗೆ 7.30 ಗಂಟೆಯಿಂದ 10.00ಗಂಟೆವರೆಗೆ ಕಾರ್ಯನಿರ್ವಹಿಸಲು ಮಾತ್ರ ಅನುಮತಿಸಲಾಗಿದೆ. ಮತ್ತು ಮದುವೆಗಳನ್ನು ನಿರ್ಬಂಧಿಸಲಾಗಿರುತ್ತದೆ.