11:08 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಂಗಳೂರು ವಿವಿಯಲ್ಲಿ ಅರೆಭಾಷೆ ಸಂಶೋಧನಾ ಕೇಂದ್ರ ಸ್ಥಾಪನೆ: ಸರಕಾರ ಘೋಷಣೆ

05/03/2022, 10:59

ಬೆಂಗಳೂರು(reporterkarnataka.com):

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಆಕಾಡೆಮಿಯು ಕಳೆದ ಎರಡು ವರ್ಷಗಳಿಂದ 

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅರೆಭಾಷೆ ಸಂಶೋಧನಾ ಕೇಂದ್ರಬೇಕೆಂಬ ಒತ್ತಾಸೆಯನ್ನು ಸರಕಾರಕ್ಕೆ ವ್ಯಕ್ತಪಡಿಸಿತ್ತು.  ಸತತ ಪ್ರಯತ್ನದ ಫಲವಾಗಿ ಕರ್ನಾಟಕ ಘನ ಸರಕಾರ 2022ರ ಬಜೆಟ್‌ನಲ್ಲಿಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅರೆಭಾಷೆ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲು  ಮಂಜೂರು ಮಾಡಿದೆ ಎಂದು ತಿಳಿಸಲು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಆಕಾಡೆಮಿ ಖುಷಿ ಪಡುತ್ತಿದೆ. 

ಆಕಾಡೆಮಿಯು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ಡಿ.ವಿ ಸದಾನಂದ ಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರುಗಳಾದ ಅಂಗಾರ ಎಸ್,  ಸುನಿಲ್‌ ಕುಮಾರ್,  ಸಿ.ಎನ್.ಅಶ್ವತ್ಥನಾರಾಯಣ, ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕರುಗಳಾದ ಕೆ.ಜಿ ಬೋಪಯ್ಯ, ಸಂಜೀವ ಮಠಂದೂರು, ಸಂಸದರಾದ ಶೋಭಾ ಕರಂದ್ಲಾಜೆ,  ಅವರಗಳ ಮೂಲಕ ಸರಕಾರಕ್ಕೆ ಮನವಿಯನ್ನು ಸಲ್ಲಿಸಿ, ಅರೆಭಾಷೆ ಸಂಶೋಧನಾ ಕೇಂದ್ರವನ್ನು ಕಾರ್ಯರೂಪಕ್ಕೆ ತರಲು ಸಹಕಾರಿಸಿರುತ್ತಾರೆ. ಈ ಬಗ್ಗೆ ಸಹಕರಿಸಿದ ಪ್ರತಿಯೊಬ್ಬರಿಗೂ ಅಕಾಡೆಮಿ ಕೃತಜ್ಞತೆ ವ್ಯಕ್ತಡಿಸುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು