ಇತ್ತೀಚಿನ ಸುದ್ದಿ
ಅನ್ ಲಾಕ್ ಬಳಿಕ ಬಿಎಂಟಿಸಿ ಟಿಕೆಟ್ ದರ ಹೆಚ್ಚಳ?: ಶೇ. 20ರಷ್ಟು ಏರಿಕೆಗೆ ಪ್ರಸ್ತಾವನೆ ಸಲ್ಲಿಕೆ?
08/06/2021, 06:53
ಬೆಂಗಳೂರು(reporterkarnataka news): ಕೊರೊನಾದಿಂದ ಜನರು ಕೆಲಸವಿಲ್ಲದೆ ಹಣಕ್ಕಾಗಿ ಪರದಾಡುತ್ತಿರುವ ಈ ಸಂದರ್ಭದಲ್ಲಿ ಬಿಎಂಟಿಸಿ ಬಡ ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕುವ ಸಾಧ್ಯತೆ ನಿಚ್ಚಳವಾಗಿದೆ. ಲಾಕ್ಡೌನ್ ತೆರವುಗೊಂಡ ಬಳಿಕ ಬಿಎಂಟಿಸಿ ಟಿಕೆಟ್ ದರ ಶೇ. 20ರಷ್ಟು ಹೆಚ್ಚಳ ಮಾಡುವ ಬಗ್ಗೆ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.
ಕಳೆದ ಬಜೆಟ್ ಸಂದರ್ಭದಲ್ಲಿ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಸರಕಾರ
ಬಿಎಂಟಿಸಿ ಪ್ರಸ್ತಾವನೆಯನ್ನು ತಿರಸ್ಕರಿಸಿತ್ತು. ಈಗ ಡೀಸೆಲ್ ದರ ಬಾರಿ ಹೆಚ್ಚಳವಾಗಿರುವ ಹಿನ್ನೆಲೆ ಮತ್ತೊಮ್ಮೆ ಟಿಕೆಟ್ ದರ ಹೆಚ್ಚಳಕ್ಕೆ ಬಿಎಂಟಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಶೇ.18ರಿಂದ 20ರಷ್ಟು ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಬಿಎಂಟಿಸಿ ಸಲ್ಲಿಕೆಯನ್ನು ಸರ್ಕಾರ ಒಪ್ಪುವ ಸಾಧ್ಯತೆ ಇದೆ ಎಂದು ರಿಪೋರ್ಟರ್ ಕರ್ನಾಟಕಕ್ಕೆ ಬಲ್ಲ ಮೂಲಗಳಿಂದ ತಿಳಿದು ಬಂದಿದೆ.