10:24 PM Tuesday8 - July 2025
ಬ್ರೇಕಿಂಗ್ ನ್ಯೂಸ್
ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ…

ಇತ್ತೀಚಿನ ಸುದ್ದಿ

ಚೆನ್ನೈ; 542 ಕೋಟಿ ಅಕ್ರಮ ಹಣ ವರ್ಗಾವಣೆ; ಚೆನ್ನೈ ಉದ್ಯಮಿ ಬಂಧಿಸಿದ ಈಡಿ

05/03/2022, 17:52

ಚೆನ್ನೈ(reporterkarnataka.com): 542 ಕೋಟಿ ರೂಪಾಯಿ ಮೊತ್ತದ  ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ

ಚೆನ್ನೈ ಮೂಲದ ಕೋಸ್ಟಲ್ ಎನರ್ಜಿ ಪ್ರೈವೇಟ್ ಲಿಮಿಟೆಡ್ (ಸಿಇಪಿಎಲ್) ಪ್ರವರ್ತಕ ಅಹ್ಮದ್ ಎಆರ್ ಬುಹಾರಿ ಅವರನ್ನು ಜಾರಿ ನಿರ್ದೇಶನಾಲಯ(ಈಡಿ) ಬಂಧಿಸಿದೆ.

ಅಹ್ಮದ್ ಅವರು ಆಮದು ಮಾಡಿಕೊಂಡ ಕಲ್ಲಿದ್ದಲಿನ ಬೆಲೆ  ಹೆಚ್ಚಳ ಮಾಡಿ, ನಂತರ ಅದನ್ನು ಸಾರ್ವಜನಿಕ ವಲಯದ ಉದ್ಯಮಗಳಿಗೆ (ಪಿಎಸ್‌ಯು) ಪೂರೈಸಲಾಗಿದೆ ಎಂದು ಈಡಿ ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿದೆ.

ಕಲ್ಲಿದ್ದಲನ್ನು  ಸಿಇಪಿಎಲ್  ನಿಂದ ನೇರವಾಗಿ ಅಥವಾ ಮಿನರಲ್ಸ್ ಮತ್ತು ಮೆಟಲ್ಸ್ ಟ್ರೇಡಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಂಎಂಟಿಸಿ) ಮೂಲಕ ಸರಬರಾಜು ಮಾಡಲ್ಪಟ್ಟಿದೆ, ಇದು ಕಡಿಮೆ ಕ್ಯಾಲೋರಿಫಿಕ್ ಮೌಲ್ಯವನ್ನು ಹೊಂದಿದೆ.

ಮಾದರಿ ಹಾಗೂ  ವಿಶ್ಲೇಷಣೆಯ (ಸಿಒಎಸ್ ಎ) ನಕಲಿ ಪ್ರಮಾಣಪತ್ರವನ್ನು ಸಲ್ಲಿಸುವ ಮೂಲಕ ಬುಹಾರಿ ಕಲ್ಲಿದ್ದಲಿನ ಗುಣಮಟ್ಟದ ಬಗ್ಗೆ ಮಾಹಿತಿಯನ್ನು ಮುಚ್ಚಿಟ್ಟಿದ್ದಾರೆ ಎಂದು ಕೇಂದ್ರ ತನಿಖಾ ಸಂಸ್ಥೆ ತಿಳಿಸಿದೆ.

ಈ ಕೆಳ ದರ್ಜೆಯ ಕಲ್ಲಿದ್ದಲಿಗೆ ಅಧಿಕ ಬೆಲೆ ನೀಡಿ ಬುಹಾರಿ 548 ಕೋಟಿ ರೂ.ಗಳನ್ನು ಗಳಿಸಿದ್ದಾರೆ. ಯುಎಇಯಲ್ಲಿನ ಸಿಇಪಿಎಲ್ ಮತ್ತು ಸಿಎನ್‌ಒ ಗ್ರೂಪ್ ಘಟಕಗಳ ಮೂಲಕ ಹಣವನ್ನು ಬೇರೆಡೆಗೆ ತಿರುಗಿಸಿದ್ದಾರೆ ಎಂದು ಈಡಿ ತನಿಖೆಯಿಂದ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು