2:10 PM Wednesday27 - August 2025
ಬ್ರೇಕಿಂಗ್ ನ್ಯೂಸ್
ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು

ಇತ್ತೀಚಿನ ಸುದ್ದಿ

ಪೋಕ್ಸೋ ಕಾಯ್ದೆ ಆರೋಪಿ ಜಾಮೀನಿಗೆ ಅರ್ಜಿ ಸಲ್ಲಿಸಿದರೆ ಸಂತ್ರಸ್ತರಿಗೆ ಮಾಹಿತಿ ಒದಗಿಸುವುದು ಕಡ್ಡಾಯ: ಹೈಕೋರ್ಟ್‌

06/03/2022, 08:12

ಬೆಂಗಳೂರು(reporterkarnataka.com);
ಅಪ್ರಾಪ್ತರ ಲೈಂಗಿಕ ದೌರ್ಜನ್ಯ ಎಸಗಿ ಪೋಕ್ಸೊ ಕಾಯ್ದೆಯಡಿ ಬಂಧನಕ್ಕೊಳಗಾಗುವ ಆರೋಪಿ ಜಾಮೀನಿಗೆಂದು ಅರ್ಜಿ‌ ಸಲ್ಲಿಸಿದರೆ, ಆ ಕುರಿತು ಸಂತ್ರಸ್ತರಿಗೆ ಅಥವಾ ಕೌನ್ಸಿಲ್ ಗೆ ಮಾಹಿತಿ ನೀಡುವುದು ಕಡ್ಡಾಯ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ದೌರ್ಜನ್ಯಕ್ಕೊಳಗಾದ ಮಕ್ಕಳ ಪೋಷಕರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಚೀಫ್ ಜಸ್ಟೀಸ್ ರಿತುರಾಜ್ ಅವಸ್ತಿ ಹಾಗೂ ಜಸ್ಟೀಸ್ ಸೂರಜ್ ಗೋವಿಂದರಾಜ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಇಲಾಖೆಗಳಿಗೆ ಈ ಕುರಿತು ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಕ್ರಿಮಿನಲ್ ಕಾನೂನು ತಿದ್ದುಪಡಿ ಕಾಯಿದೆ 2018 ರ ಸೆಕ್ಷನ್ 439(1) (A) ಪ್ರಕಾರ ಜಾಮೀನು ಅರ್ಜಿಯನ್ನು ಪರಿಗಣಿಸುವಾಗ ನ್ಯಾಯಾಲಯವು ದೂರುದಾರರಿಗೆ ಈ ಕುರಿತು ಮಾಹಿತಿ ನೀಡುವ ಅಗತ್ಯವಿದೆ. ಇದರಿಂದ ದೂರುದಾರರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಸಿಕ್ಕಂತಾಗುತ್ತದೆ ಎಂದು ಅರ್ಜಿದಾರರ ಪರ ವಕೀಲ ರೋಹನ್ ಕೊಠಾರಿ ವಾದ ಮಂಡಿಸಿದ್ದರು. ‌ಅರ್ಜಿಯ ವಿಚಾರಣೆ ನಡೆಸಿದ ವಿಭಾಗೀಯ ಪೀಠವು, ಐಪಿಸಿ ಸೆಕ್ಷನ್ 376(3), 376-AB, 376-DA ಅಥವಾ 376-DB ಅಥವಾ ಪೋಕ್ಸೋ ಕಾಯಿದೆಯ ನಿಬಂಧನೆಗಳ ಅಡಿಯಲ್ಲಿ ಆರೋಪಿಯಾಗಿರುವ ವ್ಯಕ್ತಿಯಿಂದ ಜಾಮೀನಿಗೆ ಅರ್ಜಿ ಸಲ್ಲಿಕೆಯಾಗಿರುವ ಕುರಿತು ಸಂತ್ರಸ್ತರ ಕೌನ್ಸಿಲ್ ಅಥವಾ ಪೋಷಕರಿಗೆ ಮಾಹಿತಿಯನ್ನು ಒದಗಿಸಬೇಕು ಎಂದು ಆದೇಶಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು