8:08 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಭಾರೀ ಇಳಿಕೆ ಕಂಡ ಕೊರೊನಾ ಪ್ರಕರಣ: 278 ಪಾಸಿಟಿವ್ ಕೇಸ್ ಪತ್ತೆ; 3 ಜನ ಸಾವು

06/03/2022, 08:29

ಬೆಂಗಳೂರು(reporterkarnataka.com): ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕು ಹಾಗೂ ಸಕ್ರಿಯ ಪ್ರಕರಣಗಳಲ್ಲಿ ಇಳಿಕೆಯಾಗುತ್ತಿದೆ. ರಾಜ್ಯದಲ್ಲಿ ಇಂದು, ಶನಿವಾರ ಹೊಸದಾಗಿ 278 ಸೋಂಕು ದಾಖಲಾಗಿದ್ದು, ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 458 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 3,286ಕ್ಕೆ ಇಳಿಕೆಯಾಗಿದೆ ರಾಜ್ಯದ ಸಕಾರಾತ್ಮಕತೆ ದರ 0.53% ಮತ್ತು ಮರಣ ಪ್ರಮಾಣ 1.07%ಗೆ ಕುಸಿದಿದೆ.

ಬೆಂಗಳೂರು ನಗರದಲ್ಲಿ ಹೊಸದಾಗಿ 182 ಕೊರೊನಾ ಸೋಂಕು ದಾಖಲಾಗಿದೆ ಹಾಗೂ ಒಬ್ಬರು ಮೃತಪಟ್ಟಿದ್ದಾರೆ. 2,419 ಸಕ್ರಿಯ ಪ್ರಕರಣಗಳಿವೆ. 8 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

ಜಿಲ್ಲಾವಾರು ಸೋಂಕಿನ ಮಾಹಿತಿ:

ಬಾಗಲಕೋಟೆ 1, ಬಳ್ಳಾರಿ 3, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 182, ಬೀದರ್ 3, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 1, ಚಿತ್ರದುರ್ಗ 2, ದಕ್ಷಿಣ ಕನ್ನಡ 5, ದಾವಣಗೆರೆ 0, ಧಾರವಾಡ 6, ಗದಗ 0, ಹಾಸನ 4, ಹಾವೇರಿ 4, ಕಲಬುರಗಿ 8, ಕೊಡಗು 7, ಕೋಲಾರ 4, ಕೊಪ್ಪಳ 1, ಮಂಡ್ಯ 0, ಮೈಸೂರು 12, ರಾಯಚೂರು 0, ರಾಮನಗರ 0, ಶಿವಮೊಗ್ಗ 14, ತುಮಕೂರು 5, ಉಡುಪಿ 4, ಉತ್ತರ ಕನ್ನಡ 4, ವಿಜಯಪುರ 0 ಮತ್ತು ಯಾದಗಿರಿಯಲ್ಲಿ 1 ಕೊರೊನಾ ಸೋಂಕು ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು