ಇತ್ತೀಚಿನ ಸುದ್ದಿ
ದ.ಕ. ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್ : 150 ತಪಾಸಣಾ ತಂಡ ರಚನೆ; ಪಾಸಿಟಿವಿಟಿ ಪ್ರಮಾಣ ಇಳಿಕೆಗೆ ಕ್ರಮ
08/06/2021, 07:17
ಸಾಂದರ್ಭಿಕ ಚಿತ್ರ
ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka news): ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ. ವಿ. ಹೇಳಿದ್ದಾರೆ.
ಜಿಲ್ಲೆಯಲ್ಲಿ ಅನ್ ಲಾಕ್ ಪ್ರಕ್ರಿಯೆ ನಡೆಯಬೇಕಾದರೆ ಕೊರೊನಾ ಪಾಸಿಟಿವಿಟಿ ಪ್ರಮಾಣ ಇಳಿಕೆಯಾಗಬೇಕಿದೆ. ಹಾಗಾಗಿ ಮುಂದಿನ ಒಂದು ವಾರ ಜನರ ಅನಗತ್ಯ ಸಂಚಾರ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಾಧ್ಯಮ ಜತೆ ಮಾತನಾಡಿದ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ನಿರ್ಬಂಧ ಕಟ್ಟುನಿಟ್ಟಾಗಿ ಪಾಲನೆ ಮಾಡುವುದಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ 10. ತಪಾಸಣಾ ತಂಡ ರಚಿಸಲಾಗಿದೆ.
ಜಿಲ್ಲಾದ್ಯಂತ 150 ತಂಡಗಳನ್ನು ರಚನೆ ಮಾಡಲಾಗಿದೆ. ಇದಕ್ಕೆ ಜನರು ಸಹಕರಿಸಬೇಕು ಎಂದು ತಿಳಿಸಿದ್ದಾರೆ.














