9:22 PM Monday25 - November 2024
ಬ್ರೇಕಿಂಗ್ ನ್ಯೂಸ್
ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ ವೈಜ್ಞಾನಿಕತೆ, ವೈಚಾರಿಕತೆ ಇಲ್ಲದ ಶಿಕ್ಷಣದಿಂದ ಮಾನವೀಯ ಮೌಲ್ಯ ಬೆಳೆಸಿಕೊಳ್ಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ನೀರು ಹರಿಸುವ ನಿರ್ಣಯದಿಂದ ನಮ್ಮ ಭಾಗದ ರೈತರಿಗೆ ಅನ್ಯಾಯ: ಮಾಜಿ ಸಚಿವ ನರಸಿಂಹ…

ಇತ್ತೀಚಿನ ಸುದ್ದಿ

ಯುದ್ಧಪೀಡಿತ ಉಕ್ರೇನ್‌ ನಿಂದ ಮತ್ತೆ 210 ಭಾರತೀಯರು ತಾಯ್ನಾಡಿಗೆ: ವಾಯುಪಡೆಯ ವಿಶೇಷ ವಿಮಾನ ಸಾಥ್

06/03/2022, 13:59

ರೊಮೇನಿಯಾ(reporterkarnataka.com): ಉಕ್ರೇನ್‌ ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದು, ವಾಯುಪಡೆಯ ವಿಶೇಷ ವಿಮಾನದ ಮೂಲಕ ಭಾನುವಾರ 210 ಭಾರತೀಯರನ್ನು ದೆಹಲಿಗೆ ಕರೆತರಲಾಯಿತು.

ದೆಹಲಿಯ ಹಿಂದನ್‌ ಏರ್‌ ಬೇಸ್‌ ಗೆ ವಿಮಾನ ಆಗಮಿಸಿದ್ದು, ವಿದ್ಯಾರ್ಥಿಗಳು ಸೇರಿದಂತೆ 210 ಜನರು ತಾಯ್ನಾಡಿಗೆ ಸುರಕ್ಷಿತವಾಗಿ ವಾಪಾಸ್‌ ಆಗಿದ್ದಾರೆ.

ಉಕ್ರೇನ್‌ ನ ನೆರೆ ರಾಷ್ಟ್ರ ರೊಮೇನಿಯಾದಿಂದ ಹೊರಟ ವಿಮಾನ ಇಂದು ಮುಂಜಾನೆ 5 ಗಂಟೆಗೆ ದೆಹಲಿ ತಲುಪಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಮಾಹಿತಿ ನೀಡಿದೆ.

ಶನಿವಾರ ಒಂದೇ ದಿನ ಸುಮಾರು 3 ಸಾವಿರ ಭಾರತೀಯರನ್ನು 15 ವಿಮಾನಗಳ ಮೂಲಕ ಕರೆತರಲಾಗಿದೆ. ಇದರಲ್ಲಿ 3 ವಾಯುಪಡೆ ವಿಮಾನಗಳನ್ನು ನಿಯೋಜಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು