6:22 AM Saturday16 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ರಾಮನಗರ ಎಸ್ ಪಿ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಗರಂ: ಬಡವರಿಗೆ ಹೆಚ್ಚು ದಂಡ ವಿಧಿಸಿದರೆ ಧರಣಿಯ ಎಚ್ಚರಿಕೆ

07/03/2022, 21:14

ರಾಮನಗರ(reporterkarnataka.com): ಪೊಲೀಸರಿಗೆ 500 ರೂಪಾಯಿ ವ್ಯಾಲ್ಯೂ ಗೊತ್ತಿರುವುದಿಲ್ಲ. ಆದರೆ ರೈತನಿಗೆ ಪ್ರತಿ ರೂಪಾಯಿಯೂ ಮುಖ್ಯವಾಗಿರುತ್ತೆ. ಇದೇ ರೀತಿ ದಂಡ ವಿಧಿಸುತ್ತಿದ್ದರೆ ಪ್ರತಿಭಟನೆ ಮಾಡುತ್ತೇನೆ. ಎಸ್‌ಪಿ ಕಚೇರಿ ಮುಂದೆ ಧರಣಿ ಕೂರುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. 


ಅವನು ಇಲ್ಲಿಗೆ ಏಕೆ ಬಂದಿದ್ದಾನೆಂದು ನನಗೆ ಗೊತ್ತಿದೆ ಎಂದು ರಾಮನಗರ ಎಸ್.ಪಿ ಸಂತೋಷ್ ಬಾಬು ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಗುಡುಗಿದ್ದಾರೆ.

ಇಲ್ಲಿ ಪೊಲೀಸರು ದಂಡ ವಿಧಿಸುವುದು ಹೆಚ್ಚಾಗಿದೆ ಎಂದು ಜೆಡಿಎಸ್ ಕಾರ್ಯಕರ್ತರಿಂದ ಕುಮಾರಸ್ವಾಮಿಗೆ ದೂರು ನೀಡಲಾಗಿದೆ. ಈ ವೇಳೆ ಪೊಲೀಸರ ವಿರುದ್ಧ ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೀಗೆ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ಸರ್ಕಾರ ಪೊಲೀಸರಿಗೆ ಸಂಬಳ ನೀಡುವುದಿಲ್ಲವಾ? ನಾನು ರಾಮನಗರ ಎಸ್‌ಪಿ ಜತೆ ಮಾತನಾಡುವುದಿಲ್ಲ. ನೀವು ಹೋಗಿ ಎಸ್‌ಪಿಯನ್ನು ಕೇಳಿ ಎಂದು ಹೆಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಚನ್ನಪಟ್ಟಣ ಜನರನ್ನು ದಾರಿ ತಪ್ಪಿಸಲು ಸಾಧ್ಯವಿಲ್ಲ. ಇಂಜಿನಿಯರ್ ಕರೆದೊಯ್ದು MLCಯಿಂದ ಕೆರೆ ವೀಕ್ಷಣೆ ಮಾಡಲಾಗಿದೆ. ಕೆಲಸ ಮಾಡಿಸ್ತಿರುವುದು ನಾನು, ಸ್ಕೋಪ್ ಬೇರೆಯವರದ್ದು. ಸಿ.ಪಿ. ಯೋಗೇಶ್ವರ್ ಸ್ಕೋಪ್ ತೆಗೆದುಕೊಳ್ಳಲು ಬಂದಿದ್ದಾರೆ ಎಂದು ಇದಕ್ಕೂ ಮೊದಲು ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದಲ್ಲಿ ಮಾತನಾಡಿ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಮೇಕೆದಾಟು ಪಾದಯಾತ್ರೆ ಹಣೆಬರಹ ಎಲ್ಲಿಗೆ ಬಂದಿದೆ. 10 ದಿನ ಭೂರಿ ಭೋಜನ ತಿಂದಿದ್ದೇ ಸಿಕ್ಕಿದ್ದು ಇವರಿಗೆ. ಬಜೆಟ್‌ನಲ್ಲಿ 1,000 ಕೋಟಿ ಪಡೆದು ಏನು ಮಾಡ್ತೀರಾ. ಸಾವಿರ ಕೋಟಿಯಲ್ಲಿ ಕೆಲಸ ಮಾಡಲು ಸಾಧ್ಯವೇ ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು