12:49 AM Friday30 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಉಕ್ರೇನ್ ನಿಂದ ವಾಪಸಾದ ವಿದ್ಯಾರ್ಥಿಗಳಿಂದ ಜಿಲ್ಲಾಧಿಕಾರಿಗೆ ಥ್ಯಾಂಕ್ಸ್: ಹೂಗುಚ್ಛ ನೀಡಿ ಸತ್ಕರಿಸಿದ ಡಿಸಿ

07/03/2022, 22:36

ಮಂಗಳೂರು(reporterkarnataka.com):  ಉಕ್ರೇನ್ ನಿಂದ ಆಗಮಿಸಿದ ಮಂಗಳೂರು ತಾಲೂಕಿನ ಅನನ್ಯಾ ಅನ್ನಾ, ಕ್ಲಾಟಸ್ ಒಸ್ಮಂಡ್ ಡಿಸೋಜಾ, ಅಹಮದ್ ಸಾದ್ ಅರ್ಷಾದ್, ಲಕ್ಷಣ ಪುರುಷೊತ್ತಮ ಹಾಗೂ ಮೂಡುಬಿದ್ರೆ ತಾಲೂಕಿನ ಶಲ್ವಿನ್ ಪ್ರೀತಿ ಅರ್ನಾ ಐವರು ವಿದ್ಯಾರ್ಥಿಗಳು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರನ್ನು ಭೇಟಿ ಮಾಡಿ ಧನ್ಯವಾದ ತಿಳಿಸಿದರು.

ಇದೇ ಸಂದರ್ಭದಲ್ಲಿ ತಮ್ಮ ಅನುಭವಗಳನ್ನು ಜಿಲ್ಲಾಧಿಕಾರಿಯವರೊಂದಿಗೆ ಹಂಚಿಕೊಂಡರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಂಡು ಅವರಿಗೆ ಹೂಗುಚ್ಛ ಹಾಗೂ ಪುಸ್ತಕ ನೀಡಿ ಸ್ವಾಗತಿಸಿದರು.

ವಿದ್ಯಾರ್ಥಿಗಳು ಮನೆಗೆ ಹೋಗದೇ ವಿಮಾನ ನಿಲ್ದಾಣದಿಂದ ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ಬಂದು, ಜಿಲ್ಲಾಧಿಕಾರಿಯವರೊಂದಿಗೆ ಕೇಕ್ ಕತ್ತರಿಸಿದ್ದು, ವಿಶೇಷವಾಗಿತ್ತು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪೋಷಕರು ಕೂಡ ಇದ್ದರು. ಮಂಗಳೂರಿಗೆ ಈ ವಿದ್ಯಾರ್ಥಿಗಳನ್ನು ಕರೆತರುವಲ್ಲಿ ಜಿಲ್ಲಾಧಿಕಾರಿಯವರು ವಹಿಸಿದ ಮಹತ್ತರ ಪಾತ್ರದ ಬಗ್ಗೆ ವಿದ್ಯಾರ್ಥಿಗಳು ಸ್ಮರಿಸಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು